ಕಾಮಗಾರಿಗಳ ಪ್ರಗತಿ ಪರಿಶೀಲನೆ

BKT NEWS 29-1
Published on

ಬಾಗಲಕೋಟೆ: ಪ್ರವಾಹದಿಂದ ಹಾನಿಗೊಳಪಟ್ಟ ಬಾಗಲಕೋಟೆ ಮತ್ತು ಮುಧೋಳ ತಾಲೂಕಿನ ಶಾಲೆ, ಅಂಗನವಾಡಿ, ರಸ್ತೆ ಹಾಗೂ ಹೆಸ್ಕಾಂ ಸೇರಿ ಇತರ ದುರಸ್ತಿ ಕಾಮಗಾರಿಗಳ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಕಾರ್ದರ್ಶಿ ಅಂಜುಂ ಪರ್ವೇಜ್ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮುಧೋಳ ತಾಲೂಕಿನ ಉತ್ತೂರಿನಲ್ಲಿ ಹೆಸ್ಕಾಂ ಕಾಮಗಾರಿ ಹಾಗೂ ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡ ರಸ್ತೆ ದುರಸ್ತಿ ಹಾಗೂ ಶಾಲೆ, ಅಂಗನವಾಡಿ ಕಟ್ಟಡಗಳ ಕಾಮಗಾರಿ, ರಂಜನಗಿ ಗ್ರಾಮದಲ್ಲಿ ವಿದ್ಯುತ್ ಕಾಮಗಾರಿ ಪರಿಶೀಲಿಸಿದರು. ನಂತರ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ಮಾಣವಾಗುತ್ತಿರುವ ವಾಲ್ಮೀಕಿ ಭವನ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದರು.

ಗಿರಿಗಾಂವ ಪುನರ್ವಸತಿ ಕೇಂದ್ರದಲ್ಲಿ ನಿರ್ಮಿತಿ ಕೇಂದ್ರದಿಂದ ನಿರ್ಮಾಣವಾಗುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಸತಿ ನಿಲಯಕ್ಕೆ ಭೇಟಿ ನೀಡಿ, ಕಾಮಗಾರಿ ಗುಣಮಟ್ಟ ಹಾಗೂ ಚಿಚಖಂಡಿ ಕೆ.ಡಿ. ಗ್ರಾಮದ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳಿಗೆ ನೀಡುತ್ತಿರುವ ಶಿಕ್ಷಣ ಹಾಗೂ ಆಹಾರ ಪದಾರ್ಥಗಳನ್ನು ಪರಿಶೀಲಿಸಿದರು. ಹೆಬ್ಬಾಳ ಪ್ರಾಥಮಿಕ ಶಾಲೆ ದುರಸ್ತಿ ಕಾರ್ಯ ವೀಕ್ಷಿಸಿದರು.

ಜಿಲ್ಲಾಧಿಕಾರಿ ಕೆ.ರಾಜೇಂದ್ರ, ಪ್ರೊಬೇಷನರಿ ಐಎಎಸ್ ಅಧಿಕಾರಿ ಗರೀಮಾ ಪವ್ವಾರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಲರಾಮ ಲಮಾಣಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶಂಕರಲಿಂಗ ಗೋಗಿ, ಮುಧೋಳ ತಾಪಂ ಇಒ ಎ.ವೈ. ಬಸರಿಗಿಡದ ಇತರ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net