ಜಿಲ್ಲೆಯಲ್ಲಿ ಓರ್ವ ವ್ಯಕ್ತಿಗೆ ಕೋವಿಡ್ ದೃಢ

captain dr k rajendra
Published on

ಬಾಗಲಕೋಟೆ: ಜಿಲ್ಲೆಯ ಗುಳೇದಗುಡ್ಡ ತಾಲೂಕಿನಲ್ಲಿ ಹೊಸದಾಗಿ ಓರ್ವ ವ್ಯಕ್ತಿಯಲ್ಲಿ ಸೋಮವಾರ ಕೋವಿಡ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13775 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13628 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.

ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 862 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 369282 ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 354081 ನೆಗಟಿವ್ ಪ್ರಕರಣ 136 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 11 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿವರೆಗೆ ಒಟ್ಟು 462 ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net