ಘಟಪ್ರಭಾ ಕಾಲುವೆಗಳಿಗೆ ನೀರು ಬಿಡುಗಡೆ

Govind karjol,
Published on

ಬಾಗಲಕೋಟೆ: ಹಿಡಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗಳಿಗೆ 2,000 ಕ್ಯೂಸೆಕ್ ನೀರು ಹಾಗೂ ಎಡದಂಡೆ ಕಾಲುವೆಗಳಿಗೆ 2,400 ಕ್ಯೂಸೆಕ್ ನೀರನ್ನು ಮಾ.10 ರಿಂದ ಬಿಡುಗಡೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ರೈತರ ಹಿಂಗಾರು ಹಂಗಾಮಿನ ಬೆಳೆಗಳಿಗೆ ನೀರುಣಿಸಲು ಅನುಕೂಲವಾಗಲು ಹಿಡಕಲ್ ಘಟಪ್ರಭಾ ಬಲದಂಡೆ ಕಾಲುವೆಗಳಿಗೆ 20 ದಿನಗಳವರೆಗೆ ಹಾಗೂ ಘಟಪ್ರಭಾ ಎಡದಂಡೆ ಕಾಲುವೆಗಳಿಗೆ 15 ದಿನಗಳ ಅವಧಿವರೆಗೆ ನೀರನ್ನು ಹರಿಸಲಾಗುತ್ತದೆ. ಈಗಾಗಲೇ ಬಿಸಿಲು ಹೆಚ್ಚಳವಾಗಿರುವುದರಿಂದ ರೈತರ ಬೆಳೆಗಳಿಗೆ ಪೂರಕವಾಗಿ ನೀರನ್ನು ಬಿಡುಗಡೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಭಾಗದ ರೈತರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಮತ್ತು ಮಿತವಾಗಿ ಉಪಯೋಗಿಸಬೇಕು ಎಂದು ಮನವಿ ಮಾಡಿದ್ದಾರೆ.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net