ಹೋಮ್ ಕ್ವಾರಂಟೈನ್‌ನಲ್ಲಿರುವ ಇಬ್ಬರ ಮೇಲೆ ಪ್ರಕರಣ ದಾಖಲು

corona
Published on

ಬಾಗಲಕೋಟೆ: ಜಿಲ್ಲೆಯಲ್ಲಿ 14 ದಿನ ಹೋಮ್ ಕ್ವಾರಂಟೈನ್‌ನಲ್ಲಿರುವ ಇಬ್ಬರು ವ್ಯಕ್ತಿಗಳು ನಿಯಮ ಉಲ್ಲಂಸಿ ಹೊರಗಡೆ ತಿರುಗಾಡುತ್ತಿರುವುದನ್ನು ಕಂಡು ವಶಕ್ಕೆ ಪಡೆದು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ತಿಳಿಸಿದ್ದಾರೆ.

ಸರ್ಕಾರದ ಆದೇಶದಂತೆ 14 ದಿನಗಳವರೆಗೆ ಹೋಮ್ ಕ್ವಾರಂಟೈನ್‌ನಲ್ಲಿರದೆ ನಿಯಮ ಉಲ್ಲಂಸಿ ಅನಗತ್ಯವಾಗಿ ಹೊರಗಡೆ ತಿರುಗಾಟ ನಡೆಸುತ್ತಿದ್ದ ವೇಳೆ ಅವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ. ವೈರಸ್ ಲಕ್ಷಣಗಳು ಕಂಡು ಬರದೆ ಇದ್ದರೂ 14 ದಿನ ಕಡ್ಡಾಯವಾಗಿ ಹೋಮ್ ಕ್ವಾರಂಟೈನ್‌ನಲ್ಲಿರಬೇಕು. ನಿಯಮ ಉಲ್ಲಂಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net