

ಬಾಗಲಕೋಟೆ: ನಗರದ ವಿದ್ಯಾಗಿರಿ ಬಡಾವಣೆಯಲ್ಲಿರುವ ಗೌರಿ ಶಂಕರ ಕಲ್ಯಾಣ ಮಂಟಪದಲ್ಲಿ ೆ. 27 ಮತ್ತು 28 ರಂದು ಜರುಗಲಿರುವ ಉದ್ಯೋಗ ಮೇಳಕ್ಕೆ ಇಲ್ಲಿವರೆಗೆ 4,835 ಉದ್ಯೋಗಿಗಳು ಹೆಸರು ನೋಂದಾಯಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ಹೇಳಿದರು.
ಮೇಳದಲ್ಲಿ ಅಂದಾಜು 5 ಸಾವಿರ ಉದ್ಯೋಗಾಕಾಂಕ್ಷಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, 45 ಹೆಚ್ಚು ಕಂಪನಿಗಳು ಈಗಾಗಲೇ ನೋಂದಣಿ ಮಾಡಿಕೊಂಡಿವೆ. ಇನ್ನು ಹೆಚ್ಚಿನ ಕಂಪನಿಗಳು ಪಾಲ್ಗೊಳ್ಳುವ ನೀರಿಕ್ಷೆ ಇದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವಿವಿಧ ಕಂಪನಿಗಳಿಂದ ಪಡೆದ ಮಾಹಿತಿ ಪ್ರಕಾರ 2800 ಕ್ಕೂ ಅಧಿಕ ಹುದ್ದೆಗಳಿಗೆ ಸಂದರ್ಶನ ನಡೆಯಲಿದೆ. 7ನೇ ತರಗತಿ, ಎಸ್ಸೆಸ್ಸೆಲ್ಸಿ, ಪದವಿ ಹಾಗೂ ಡಿಪ್ಲೊಮಾ ಸೇರಿ ವೃತ್ತಿಪರ ಕೋರ್ಸ್‌ಗಳನ್ನು ಪೂರೈಸಿರುವ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶಗಳು ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ಎಲ್ಲ ಕೌಶಲ ಕೇಂದ್ರಗಳಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿದೆ ಎಂದರು.
ಉದ್ಯೋಗ ಮೇಳಕ್ಕೆ ಆಗಮಿಸುವ ಉದ್ಯೋಗಾಕಾಂಕ್ಷಿಗಳಿಗೆ ಅಲ್ಪೋಪಾಹಾರದ ವ್ಯವಸ್ಥೆ ಮಾಡಲಾಗಿದೆ. ಮಹಿಳೆಯರಿಗೆ ಮತ್ತು ಅಂಗವಿಕಲರಿಗೆ ಪ್ರತ್ಯೇಕ ನೋಂದಣಿ ಕೌಂಟರ್ ಆರಂಭಿಸಲಾಗುತ್ತದೆ. ಉದ್ಯೋಗ ಮೇಳ ಆವರಣದಲ್ಲಿ ಪ್ರಥಮ ಚಿಕಿತ್ಸೆ ಮತ್ತು ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಅಲ್ಲದೆ, ಉದ್ಯೋಗದಾತರಿಗೆ ಮತ್ತು ಉದ್ಯೋಗಾಕಾಂಕ್ಷಿಗಳ ವಾಹನ ನಿಲುಗಡೆಗೆ ಕಾಳಿದಾಸ ಶಿಕ್ಷಣ ಸಂಸ್ಥೆ ಆವರಣ ಮತ್ತು ಕಲ್ಯಾಣ ಮಂಟಪದ ಆವರಣದಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಜಿಲ್ಲೆಯ ಬೇರೆ ಬೇರೆ ಊರಿನಿಂದ ಬರುವ ಉದ್ಯೋಗಾಕಾಂಕ್ಷಿಗಳ ಅನುಕೂಲಕ್ಕಾಗಿ ಎಲ್ಲ ಬಸ್‌ಗಳನ್ನು ವಿದ್ಯಾಗಿರಿಯ ಇಂಜಿನಿಯರಿಂಗ್ ಕಾಲೇಜು ವೃತ್ತಕ್ಕೆ ನಿಲುಗಡೆ ಮಾಡಲು ಸಾರಿಗೆ ಸಂಸ್ಥೆಗೆ ಸೂಚಿಸಲಾಗಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸುವುದಲ್ಲದೆ ಅವರು ಕೆಲಸ ಮಾಡುತ್ತಿರುವ ಬಗ್ಗೆ ಜಾಬ್ ಟ್ರಾೃಕಿಂಗ್ ಕೂಡ ಮಾಡಲಾಗುತ್ತಿದೆ ಎಂದರು.
ಅಪರ ಜಿಲ್ಲಾಧಿಕಾರಿ ಮಹಾದೇವ ಮುರುಗಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ಗರಿಮಾ ಪವ್ವಾರ, ಎನ್‌ಐಸಿ ಅಧಿಕಾರಿ ಗಿರಿಯಾಚಾರ, ಜಿಲ್ಲಾ ಕೌಶಲ ತರಬೇತಿ ಕೇಂದ್ರದ ಪ್ರಾಂಶುಪಾಲ ಎಸ್.ಎಸ್. ಹಿರೇಮಠ ಉಪಸ್ಥಿತರಿದ್ದರು.
ಡಿಸಿಎಂ ಗೋವಿಂದ ಕಾರಜೋಳ ಉದ್ಘಾಟನೆ
27 ರಂದು ಬೆಳಗ್ಗೆ 10 ಗಂಟೆಗೆ ವಿದ್ಯಾಗಿರಿಯ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮೇಳಕ್ಕೆ ಚಾಲನೆ ನೀಡಲಿದ್ದಾರೆ. ಉನ್ನತ ಶಿಕ್ಷಣ ಸಚಿ
ವ ಡಾ.ಅಶ್ವತ್ ನಾರಾಯಣ ಉಪಸ್ಥಿತರಿರುವರು. ಶಾಸಕ ವೀರಣ್ಣ ಚರಂತಿಮಠ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಗೌರವಾನ್ವಿತ ಅತಿಥಿಗಳಾಗಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ, ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ಸಂಸದ ಪಿ.ಸಿ. ಗದ್ದಿಗೌಡರ ಸೇರಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಗಣ್ಯಮಾನ್ಯರು ಆಗಮಿಸಲಿದ್ದಾರೆ.
ಹೆಸರು ನೋಂದಣಿಗೆ 25 ಕೊನೆಯ ದಿನವಾಗಿತ್ತು. ಅನಿವಾರ್ಯ ಕಾರಣಗಳಿಂದ ಆನ್‌ಲೈನ್‌ನಲ್ಲಿ ನೋಂದಣಿಯಾಗದೆ ಇರುವ ಅಭ್ಯರ್ಥಿಗಳು ಉದ್ಯೋಗ ಮೇಳ ನಡೆಯುವ ಸ್ಥಳದಲ್ಲೇ ಸ್ಥಾಪಿಸಲಾಗುವ ಕೌಂಟರ್‌ಗಳಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಭಾಗವಹಿಸುವ ಅಭ್ಯರ್ಥಿಗಳು ವಿದ್ಯಾರ್ಹತೆಯ ನಕಲು ದಾಖಲಾತಿಗಳು, ಅನುಭವ ಪ್ರಮಾಣ ಪತ್ರ ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಹಾಜರಾಗಬಹುದು.
- ಮಹಾದೇವ ಮುರುಗಿ ಅಪರ ಜಿಲ್ಲಾಧಿಕಾರಿ