ಮಾ.11 ರಂದು ವಿಧಾನಸೌಧಕ್ಕೆ ಮುತ್ತಿಗೆ

BKT NEWS 26-2
Published on

ಬಾಗಲಕೋಟೆ: ನ್ಯಾಯಮೂರ್ತಿ ಎ.ಜೆ. ಸದಾಶಿವ ವರದಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯಿಂದ ಮಾ.11 ರಂದು ರಾಜ್ಯದ ವಿವಿಧ ಭಾಗಗಳಿಂದ ಮಾದಿಗ ಸಮಾಜ ಬಾಂಧವರು ಬೆಂಗಳೂರಿಗೆ ತೆರಳಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ ಎಂದು ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಬಿ.ನರಸಪ್ಪ ದಂಡೋರ ಹೇಳಿದರು.

ಅಂದು ಮಧ್ಯಾಹ್ನ 12.30 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ಮೂಲಕ ವಿಧಾನಸೌಧಕ್ಕೆ ತೆರಳಲಿದ್ದೇವೆ. ರಾಜ್ಯದ ವಿವಿಧ ಜಿಲ್ಲೆಗಳಿಂದ 20 ರಿಂದ 25 ಸಾವಿರ ಜನರು ಈ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ವರದಿಯನ್ನು ಸಲ್ಲಿಸಿ ಅನೇಕ ವರ್ಷಗಳು ಗತಿಸಿವೆ. ಆದರೂ ಅನುಷ್ಠಾನಕ್ಕೆ ಬಂದಿಲ್ಲ. ಸದಾಶಿವ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಮನೆಗೆ ಮುತ್ತಿಗೆ ಹಾಕಲಾಗಿತ್ತು. ಈ ವೇಳೆ ಅವರು, ಈ ಬಗ್ಗೆ ಚರ್ಚಿಸಲು ಸಮಯಾವಕಾಶ ಕೇಳಿದ್ದರು. ಆದರೆ, ಇಲ್ಲಿವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಹಿನ್ನೆಲೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದರು. ಮುಖಂಡರಾದ ವೆಂಕಟೇಶ ಕತ್ತಿ, ಬಾಬು ಆಸಂಗಿ, ಗುರುರಾಜ ಭಂಡಾರಿ ಸುದ್ದಿಗೋಷ್ಠಿಯಲ್ಲಿ ಇದ್ದರು.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net