ನಿರ್ಲಕ್ಷೃ ಧೋರಣೆ ಸಲ್ಲ

BKT NEWS 29-1
Published on

ಬಾಗಲಕೋಟೆ: ಮಾಸಿಕ 12 ಸಾವಿರ ವೇತನ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಜಿಲ್ಲೆಯ ಆಶಾ ಕಾರ್ಯಕರ್ತೆಯರು ಜಿಲ್ಲಾಡಳಿತ ಭವನದ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಆಶಾ ಕಾರ್ಯಕರ್ತೆಯರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಲಿಕ ಅಪರ ಜಿಲ್ಲಾಧಿಕಾರಿ ಮಹದೇವ ಮುರಗಿ ಅವರ ಮೂಲಕ ಸಿ.ಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಎಚ್.ಟಿ ಮಾತನಾಡಿ, ಪ್ರತಿ ಗ್ರಾಮ ಮತ್ತು ನಗರ ಮಟ್ಟದಲ್ಲಿ ಕೆಲಸ ನಿರ್ವಹಿಸುವ ಆಶಾ ಕಾರ್ಯಕರ್ತೆಯರು ಗರ್ಭಿಣಿ ಮಹಿಳೆಯರ ಸುರಕ್ಷಿತ ಹೆರಿಗೆ, ಸ್ವಸ್ಥ ಶಿಶುವಿನ ಜನನ, ಆರೈಕೆ, ಆರೋಗ್ಯ ಮತ್ತು ಪೌಷ್ಠಿಕತೆಯ ಅರಿವು ಮೂಡಿಸುತ್ತಿದ್ದಾರೆ. ಕ್ಷಯ, ಕುಷ್ಠ ರೋಗ, ಮಲೇರಿಯಾ, ಡೆಂೆ, ಚಿಕುನ್‌ಗುನ್ಯಾ ಇತ್ಯಾದಿ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ. ಕರೊನಾ ನಿಯಂತ್ರಣಕ್ಕೆ ಅವಿರತ ಶ್ರಮ ವಹಿಸುತ್ತಿದ್ದಾರೆ. ಆದರೇ ಆಶಾ ಕಾರ್ಯಕರ್ತೆಯರ ಬಗ್ಗೆ ಸರ್ಕಾರ ನಿರ್ಲಕ್ಷೃ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ಗೌರವಧನ ಮತ್ತು ಕೇಂದ್ರ ಸರ್ಕಾರದ ಪ್ರೋತ್ಸಾಹಧನ ಎರಡು ಸೇರಿಸಿ ಮಾಸಿಕ ಕನಿಷ್ಠ 12 ಸಾವಿರ ರೂ. ಗೌರವಧನ ನಿಗದಿ ಮಾಡಬೇಕು, ಕರೊನಾ ಸೋಂಕಿನಿಂದ ರಕ್ಷಣೆಗೆ ಎಲ್ಲಾ ಸುರಕ್ಷತಾ ಪರಿಕರಗಳನ್ನು ನೀಡಬೇಕು. ಕಾಕಾಲಕ್ಕೆ ಆರೋಗ್ಯ ಪರೀಕ್ಷೆ ಮಾಡಬೇಕು. ಕರೊನಾ ದೃಢಪಟ್ಟಲ್ಲಿ ಉಚಿತವಾಗಿ ಚಿಕಿತ್ಸೆ ನೀಡಬೇಕು ಎಂದು ಆಗ್ರಹಿಸಿದರು.

ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಅಂಜನಾ ಕುಂಬಾರ, ಮುಖಂಡರಾದ ಶೈನಾಜ ಜಂಗಿ, ಶೀಲಾ ಮೆಳ್ಳಿಗೇರಿ, ರುಕ್ಸಾನಾ ನಾಗಠಾಣ, ಕಲಾವತಿ, ಚಿನ್ನಮ್ಮ, ನಂದಿನಿ, ಸಾನು, ಸುನಿತಾ ಜಂಬಗಿ ಸುರೇಖಾ ಕಾಳೆ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಇದ್ದರು.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net