ಪ್ರವಾಸಿ ತಾಣಗಳಿಗೆ ಭೇಟಿ ಸಮಿತಿ ಭೇಟಿ

BKT NEWS 23-1
Published on

ಬಾಗಲಕೋಟೆ: ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಭರವಸೆಗಳ ಸಮಿತಿ ಸದಸ್ಯರು ಬಾದಾಮಿ ಹಾಗೂ ಹುನಗುಂದ ತಾಲೂಕಿನ ವಿವಿಧ ಪ್ರವಾಸಿ ತಾಣಗಳಿಗೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಾದಾಮಿ ಗುಹಾಂತರ ದೇವಾಲಯಗಳಿಗೆ ಭೇಟಿ ನಂತರ ಬನಶಂಕರಿ ದೇವಿ ದರ್ಶನ ಪಡೆದರು. ಶಿವಯೋಗ ಮಂದಿರ, ಮಹಾಕೂಟ, ಪಟ್ಟದಕಲ್ಲು ಹಾಗೂ ಐಹೊಳೆಗೆ ಭೇಟಿ ನೀಡಿ ಸ್ಮಾರಕಗಳನ್ನು ವೀಕ್ಷಿಸಿದರು. ಭರವಸೆ ಸಮಿತಿಯ ವಿಧಾನ ಪರಿಷತ್ ಸದಸ್ಯರಾದ ಕೆ.ಸಿ. ಕೊಂಡಯ್ಯ, ಬಸವರಾಜ ಹೊರಟ್ಟಿ, ಕೆ.ಟಿ.ಶ್ರೀಕಂಠೇಗೌಡ, ಎಂ.ಎ. ಗೋಪಾಲಸ್ವಾಮಿ, ಪ್ರವಾಸೋದ್ಯಮ ಇಲಾಖೆಯ ಆಯುಕ್ತ ನವೀನಕುಮಾರ, ವಿಧಾನ ಪರಿಷತ್ ಸಚಿವಾಲಯದ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮೀ, ಬಾದಾಮಿ ತಹಸೀಲ್ದಾರ್ ಸುಹಾಸ್ ಇಂಗಳೆ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕಿ ಮಹೆಬೂಬಿ ಬಿ., ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಂ.ಎನ್.ಮೇಲಿನಮನಿ, ಪ್ರವಾಸೋದ್ಯಮ ಇಲಾಖೆಯ ಅನಿಲಕುಮಾರ ಡಿ. ಸೇರಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net