

ಬಾಗಲಕೋಟೆ: ಜಿಲ್ಲೆಯಲ್ಲಿ 165 ಜನ ಕೋವಿಡ್‌ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 212 ಕೋವಿಡ್ ಪ್ರಕರಣಗಳು ಮಂಗಳವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕೆ. ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 7399 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 6228 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 83, ಬಾದಾಮಿ 33, ಹುನಗುಂದ 32, ಬೀಳಗಿ 15, ಮುಧೋಳ 17, ಜಮಖಂಡಿ ತಾಲೂಕಿನ 32 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 1405 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ 73254 ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 64138 ನೆಗೆಟಿವ್ ಪ್ರಕರಣ, 7399 ಪಾಸಿಟಿವ್ ಪ್ರಕರಣ ಹಾಗೂ 81 ಜನ ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 1043 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ 217 ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ್ ಆಗಿವೆ. ಕಂಟೇನ್ಮೆಂಟ್ ಜೋನ್ 725 ಇರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.