ಕರ್ನಾಟಕ ಬಂದ್‌ಗೆ ಕರವೇ ಬೆಂಬಲ

BKT 3-1
Published on

ಬಾಗಲಕೋಟೆ: ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಡಿ.5 ರಂದು ಕರ್ನಾಟಕ ಬಂದ್‌ಗೆ ಎಚ್. ಶಿವರಾಮೇಗೌಡ ನೇತೃತ್ವದ ಕರ್ನಾಟಕ ರಕ್ಷೃಣಾ ವೇದಿಕೆ ಸಂಪೂರ್ಣ ಬೆಂಬಲ ನೀಡಿದ್ದು, ಜಿಲ್ಲೆಯ ಜನತೆ ಬಂದ್‌ಗೆ ಬೆಂಬಲಿಸಬೇಕು ಎಂದು ವೇದಿಕೆ ಜಿಲ್ಲಾಧ್ಯಕ್ಷೃ ಬಸನಗೌಡ ಪಾಟೀಲ ಮನವಿ ಮಾಡಿದರು.

ಅಂದು ಬೆಳಗ್ಗೆಯಿಂದ ಬಂದ್ ಬೆಂಬಲಿಸಿ ಶಾಂತಿಯುವಾಗಿ ಹೋರಾಟ ಹಾಗೂ ಪ್ರತಿಭಟನೆ ನಡೆಸಲಾಗುವುದು. ಹೀಗಾಗಿ ಜಿಲ್ಲಾದ್ಯಂತ ಬಂದ್‌ಗೆ ವ್ಯಾಪಾರಸ್ಥರು, ಸಂಘ, ಸಂಸ್ಥೆಗಳು ತಮ್ಮ ವ್ಯಾಪಾರ ವಹಿವಾಟು, ಕಚೇರಿ ಬಂದ್ ಮಾಡಿ ಬೆಂಬಲಿಸಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ನಿಗಮವನ್ನು ಪ್ರತ್ಯೇಕವಾಗಿ ಸ್ಥಾಪಿಸುವ ಮೂಲಕ ಕನ್ನಡಿಗರಲ್ಲಿ ಒಡಕು ಮೂಡಿಸುವ ಪ್ರಯತ್ನ ಮಾಡುತ್ತಿದೆ. ಭವಿಷ್ಯದಲ್ಲಿ ಇದು ಅಪಾಯ ಉಂಟು ಮಾಡಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಮರಾಠಾ ಸಮುದಾಯದ ಜನರು ಕನ್ನಡಿಗರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಅವರ ವಿರುದ್ಧ ನಮ್ಮ ಹೋರಾಟವಲ್ಲ. ನಾಡದ್ರೋಹಿ ಮರಾಠ ಭಾಷಿಕರು, ಎಂಇಎಸ್ ಬಗ್ಗೆ ಮೃದು ಧೋರಣೆ ಹೊಂದಿರುವ ರಾಜ್ಯ ಸರ್ಕಾರದ ವಿರುದ್ಧ ನಮ್ಮ ಹೋರಾಟ. ಗೋವಾ, ಮಹಾರಾಷ್ಟ್ರ, ಗೋವಾದಲ್ಲಿ ಕನ್ನಡಿಗರ ಮೇಲೆ ಹಲ್ಲೆ, ದೌರ್ಜನ್ಯ ನಡೆದಾಗ ರಾಜ್ಯ ಸರ್ಕಾರ ಕಣ್ಣುಮುಚ್ಚಿ ಕುಳಿತಿತ್ತು. ಇದೀಗ ಬೆಳಗಾವಿ ಲೋಕಸಭಾ ಉಪ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ವೋಟಿಗಾಗಿ ಮರಾಠ ಅಭಿವೃದ್ಧಿ ನಿಗಮ ರಚಿಸಿರುವುದು ತರವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡರಾದ ಚೇತನ ದೊಡ್ಡಮನಿ, ಪವನ ಕಾಂಬಳೆ, ಪ್ರಶಾಂತ ಭಾವಿಕಟ್ಟಿ, ಶಂಕರ ಮುತ್ತಲಗೇರಿ ಸುದ್ದಿಗೋಷ್ಠಿಯಲ್ಲಿ ಇದ್ದರು.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net