ಬಿವಿವಿ ಸಂಘದಿಂದ ಎರಡು ಕೋಟಿ ರೂ.

Veeranna
Published on

ಬಾಗಲಕೋಟೆ: ಕರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅವಿರತವಾಗಿ ಶ್ರಮಿಸುತ್ತಿವೆ. ಸಿಎಂ ಬಿ.ಎಸ್.ಯಡಿಯೂರಪ್ಪ ಪರಿಹಾರ ನಿಧಿ ನೀಡುವಂತೆ ಮನವಿ ಮಾಡಿದ ಹಿನ್ನೆಲೆ ಬಾಗಲಕೋಟೆ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದಿಂದ 2 ಕೋಟಿ ರೂ. ಹಾಗೂ ವೈಯಕ್ತಿಕವಾಗಿ 5 ಲಕ್ಷ ರೂ. ನೀಡುವುದಾಗಿ ಸಂಘದ ಕಾರ್ಯಾಧ್ಯಕ್ಷ, ಶಾಸಕ ವೀರಣ್ಣ ಚರಂತಿಮಠ ಘೋಷಣೆ ಮಾಡಿದ್ದಾರೆ.

ವಿಶ್ವದಲ್ಲಿಯೇ ವ್ಯಾಪಕವಾಗಿ ಹಬ್ಬುತ್ತಿರುವ ಕರೊನಾ ವೈರಸ್ ಭಯಾನಕವಾಗಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಶ್ವವನ್ನೇ ಮೆಚ್ಚುವಂತಹ ಕೆಲಸ ಮಾಡುತ್ತಿದ್ದಾರೆ. ಸಿಎಂ ಯಡಿಯೂರಪ್ಪ ಕೂಡ ವಿಶೇಷ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದು, ಅವರ ಕೈಬಲಪಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ಪರಿಹಾರ ನಿಧಿಗೆ ಧನ ಸಹಾಯ ನೀಡಲಾಗುತ್ತಿದೆ ಎಂದು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net