2.20 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ

bkt-6-9
Published on

ಬಾಗಲಕೋಟೆ: ಬಾಗಲಕೋಟೆ ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಒಟ್ಟು 2.20 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ವೀರಣ್ಣ ಚರಂತಿಮಠ, ಸಂಸದ ಪಿ.ಸಿ.ಗದ್ದಿಗೌಡರ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು.

ಮುಚಖಂಡಿ ಗ್ರಾಮದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ವತಿಯಿಂದ ಕೈಗೊಳ್ಳಲಾಗುವ 20 ಲಕ್ಷ ರೂ. ವೆಚ್ಚದ ಸಿ.ಸಿ.ರಸ್ತೆ ಕಾಮಗಾರಿ, ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಳ್ಳುವ 22 ಲಕ್ಷ ರೂ. ವೆಚ್ಚದ ಸರ್ಕಾರಿ ಹಿರಿಯ ಪ್ರಾಥಮಿ ಶಾಲೆಯ 2 ಕೊಠಡಿಗಳ ನಿರ್ಮಾಣ ಕಾಮಗಾರಿ, ನೀಲಾನಗರದಲ್ಲಿ 30 ಲಕ್ಷ ರೂ. ವೆಚ್ಚದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 4 ಹೆಚ್ಚುವರಿ ಕೊಠಡಿಗಳ ನಿರ್ಮಾಣ, 5 ಲಕ್ಷ ರೂ. ವೆಚ್ಚದ ಶೌಚಗೃಹ ಕಟ್ಟಡ ಹಾಗೂ ಸರ್ಕಾರಿ ಬಾಲಕಿಯರ ಪ್ರಾಥಮಿಕ ಶಾಲೆಯಲ್ಲಿ 2.50 ಲಕ್ಷ ರೂ. ವೆಚ್ಚದಲ್ಲಿ ಶೌಚಗೃಹ ಕಟ್ಟಡ ನಿರ್ಮಾಣ, ಶಿರೂರ ಗ್ರಾಮದಲ್ಲಿ ಜನರಲ್ ಕಾಲನಿಗಳಲ್ಲಿ ಸಿ.ಸಿ.ರಸ್ತೆ, ಅಂಗನವಾಡಿ ಕೇಂದ್ರಗಳ ದುರಸ್ತಿ ಸೇರಿ ಬೆನಕಟ್ಟಿ ಮನ್ನಿಕಟ್ಟಿ, ಕಿರಸೂರ ಗ್ರಾಮಗಳಲ್ಲಿ ಕೈಗೊಳ್ಳುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ತಾಪಂ ಅಧ್ಯಕ್ಷ ಚನ್ನನಗೌಡ ಪರನಗೌಡರ, ಜಿಪಂ ಸದಸ್ಯ ರಂಗಪ್ಪ ಗೌಡರ, ಬಿಟಿಡಿಎ ಮಾಜಿ ಅಧ್ಯಕ್ಷ ಸಿ.ವಿ.ಕೋಟಿ, ಟಿಎಪಿಸಿಎಂಎಸ್ ಅಧ್ಯಕ್ಷ ಶೇಖಪ್ಪ ಮಾಚಾ, ತಾಪಂ ಸದಸ್ಯ ರಾಜಶೇಖರ ಅಂಗಡಿ, ಮುಖಂಡರಾದ ಗುರುಬಸವ ಸೂಳಿಬಾವಿ, ಪರಶು ಛಬ್ಬಿ, ಸಿ.ಎಂ.ಪ್ಯಾಟಿಶೆಟ್ಟರ, ಹನಮಪ್ಪಜ್ಜ ದೊಡ್ಡಪೂಜಾರಿ, ಉಮೇಶ ಜುಮನಾಳ, ಪ್ರಕಾಶ ಕೊಣ್ಣೂರ, ಸುರೇಶ ಗೌಡರ, ಸಂಗಪ್ಪ ಹಿತ್ತಲಮನಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net