

ಬಾಗಲಕೋಟೆ: ಮುಧೋಳ ಹಿರಿಯ ನಾಗರಿಕರ ವೇದಿಕೆ, ನಿವೃತ್ತ ನೌಕರರ ಸಂಘದ ಆಶ್ರಯದಲ್ಲಿ ಅ.2 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ, ಮಹಾತ್ಮಗಾಂಧೀಜಿ ಜಯಂತಿ ಹಾಗೂ ಲಾಲ್ಬಹಾದ್ದೂರ ಶಾಸೀ ಜಯಂತಿ ಹಮ್ಮಿಕೊಳ್ಳಲಾಗಿದೆ.
ಮುಧೋಳದ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಮಂದಿರದಲ್ಲಿ ಅಂದು ಬೆಳಿಗ್ಗೆ 8 ಗಂಟೆಗೆ ನಡೆಯುವ ಸಮಾರಂಭದ ಅಧ್ಯಕ್ಷೃತೆಯನ್ನು ಹಿರಿಯರ ನಾಗರಿಕ ವೇದಿಕೆಯ ಅಧ್ಯಕ್ಷೃ ಕಲ್ಲಪ್ಪ ಸಬರದ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ನಿವೃತ್ತ ನೌಕರರ ಸಂಘದ ಅಧ್ಯಕ್ಷೃ ಆರ್.ಎಸ್. ರಾಮತೀರ್ಥ ಆಗಮಿಸುವರು. ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷೃಕ ಡಾ. ಸಿದ್ದು ದಿವಾಣ ಉಪನ್ಯಾಸ ನೀಡಲಿದ್ದಾರೆ. ಹಿರಿಯ ನಾಗರಿಕರ ವೇದಿಕೆಯ ಉಪಾಧ್ಯಕ್ಷೃ ಎಂ.ವಿ. ದಾಸರಡ್ಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿವೃತ್ತ ಅಧಿಕಾರಿ ಎಸ್.ಎಸ್. ಬೆಳಗಲಿ ಉಪಸ್ಥಿತರಿರುವರು ಎಂದು ಹಿರಿಯ ನಾಗರಿಕರ ವೇದಿಕೆಯ ಕಾರ್ಯದರ್ಶಿ ಎನ್.ಬಿ.ಮುರಗೋಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.