ಮಾಜಿ ಸಚಿವೆ ಉಮಾಶ್ರೀ ಮನೆಯಲ್ಲಿ ಕಳ್ಳತನ

BKT 2-1
Published on

ಬಾಗಲಕೋಟೆ: ಜಿಲ್ಲೆಯ ರಬಕವಿಯ ವಿದ್ಯಾನಗರದಲ್ಲಿರುವ ಮಾಜಿ ಸಚಿವೆ ಉಮಾಶ್ರೀ ಮನೆಯಲ್ಲಿ ಕಳ್ಳತನವಾಗಿದೆ.

ಮನೆಯ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ಮನೆಯಲ್ಲಿ ಹಣ ಹಾಗೂ ವಸ್ತು ಕಳುವು ಮಾಡಿರಬಹುದು ಎಂದು ಶಂಕಿಸಲಾಗಿದೆ. ಸೋಮವಾರ ಬೆಳಗಿನ ಜಾವ ಈ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಕೈಚಳಕ ತೋರಿಸಿದ್ದಾರೆ. ಬನಹಟ್ಟಿ ಸಿಪಿಐ ಕರುಣೇಶಗೌಡ ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದ್ದಾರೆ. ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net