ಸಫಾಯಿ ಕರ್ಮಚಾರಿಗಳಿಗೆ ಸೌಲಭ್ಯ ಒದಗಿಸಿ

BKT 19-1
Published on

ಬಾಗಲಕೋಟೆ: ಸಾಯಿ ಕರ್ಮಚಾರಿಗಳಿಗೆ ದೊರೆಯಬಹುದಾದ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಕಾರ್ಯಾಗಾರ ಹಮ್ಮಿಕೊಳ್ಳುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಜಾಗೃತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಯಿ ಕರ್ಮಚಾರಿಗಳಿಗೆ ದೊರೆಯಬೇಕಾದ ಗೃಹ ಭಾಗ್ಯ, ಹೊರಗುತ್ತಿಗೆ ನೌಕರರ ಪಿಎ್ ಮತ್ತು ಇಎಸ್‌ಐ, ಆರೋಗ್ಯ ಭಾಗ್ಯ, ಶಿಕ್ಷಣ ಹಾಗೂ ಸೂರು ಒದಗಿಸುವುದು ಸೇರಿ ಇನ್ನು ಅನೇಕ ಸೌಲಭ್ಯಗಳ ದೊರೆಕಿಸಿ ಕೊಡುವ ನಿಟ್ಟಿನಲ್ಲಿ ಈ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಕಾರ್ಯಾಗಾರವನ್ನು ಏರ್ಪಡಿಸುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸಫಾಯಿ ಕರ್ಮಚಾರಿಗಳ ಕುಟುಂಬಕ್ಕೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಈ ಕುರಿತು ಆಯಾ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳು ವಿವಿಧ ಸೌಲಭ್ಯಗಳ ಬಗ್ಗೆ ಕರಪತ್ರಗಳನ್ನು ಹೊರಡಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಮ್ಯಾನುವೆಲ್ ಸ್ಟ್ರಾೃವೆಂಜರ್ಸ್‌ ಪದ್ಧತಿ ನಿಷೇಧವಿದ್ದು, ಈ ಕುರಿತು ತೀವ್ರ ನಿಗಾ ಇಡಬೇಕು. ಸಂಬಂಧಪಟ್ಟ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ತಿಳಿಸಿದರು.

ಪೌರ ಕಾರ್ಮಿಕರಿಗೆ ಅಗತ್ಯ ಸುರಕ್ಷಿತ ಸಾಧನ ಸಲಕರಣೆಗಳನ್ನು ಪೂರೈಸಬೇಕು. ಪೌರಕಾರ್ಮಿಕರನ್ನು ಸಮರ್ಪಕವಾಗಿ ಗುರುತಿಸಿ ಸೌಲಭ್ಯ ಕಲ್ಪಿಸಬೇಕು. ಇಎಸ್‌ಐ, ಪಿಎ್ ಅವರ ಖಾತೆಗೆ ಜಮಾ ಆದ ಬಗ್ಗೆ ಪರಿಶೀಲನೆ ಮಾಡಬೇಕು. ನೂತನ ವೇತನ ಜಾರಿ, ಕಾಲಕಾಲಕ್ಕೆ ಪೌರಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಮಾಡಿಸುವುದು, ವಸತಿ ಶಾಲೆಗಳಲ್ಲಿ ಸಫಾಯಿ ಕರ್ಮಚಾರಿ ಮಕ್ಕಳಿಗೆ ಪ್ರವೇಶಾತಿ ಹಾಗೂ ವಿದ್ಯಾರ್ಥಿವೇತನ ದೊರಕಿಸುವ ವ್ಯವಸ್ಥೆಯಾಗಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಅಮರೇಶ ನಾಯಕ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹಾಂತೇಶ ಪೋತದಾರ, ಆಹಾರ ಇಲಾಖೆ ಉಪನಿರ್ದೇಶಕ ಶ್ರೀಶೈಲ ಕಂಕಣವಾಡಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಗಣಪತಿ ಪಾಟೀಲ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸವಿತಾ ಕಾಳೆ, ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ಸೇರಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಕ್ರಿಯಾ ಯೋಜನೆಗೆ ಅನುಮೋದನೆ ಪಡೆಯಿರಿ
ಪ್ರಧಾನ ಮಂತ್ರಿ ಆದರ್ಶಗ್ರಾಮ ಯೋಜನೆಯಡಿ 2018-19 ಹಾಗೂ 2019-20ನೇ ಸಾಲಿನಲ್ಲಿ ಆಯ್ಕೆಯಾದ ಗ್ರಾಮಗಳಲ್ಲಿ ಕೈಗೊಳ್ಳಬೇಕಾದ ಕಾಮಗಾರಿಗಳ ಕ್ರಿಯಾಯೋಜನೆಗಳ ಸಂಪೂರ್ಣ ಮಾಹಿತಿಯನ್ನು ಜಿಲ್ಲಾಧಿಕಾರಿ ಕೆ.ರಾಜೇಂದ್ರ ಪಡೆದರು. ಸಮಾಜ ಕಲ್ಯಾಣ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಕ್ರಿಯಾ ಯೋಜನೆಗಳನ್ನು ಪರಿಶೀಲಿಸಿ ಅನುಮೋದನೆ ಪಡೆಯಬೇಕು. ಆಯ್ಕೆಯಾದ ಗ್ರಾಮದಲ್ಲಿ ಕೈಗೊಂಡ ಕಾಮಗಾರಿಗಳ ಪರಿಶೀಲನೆಗೆ ಅನಿರೀಕ್ಷಿತಗಾಗಿ ಭೇಟಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net