ಮಾ.15 ರಂದು ಅಧಿಸೂಚನೆ

captain dr k rajendra
Published on

ಬಾಗಲಕೋಟೆ: ರಾಜ್ಯ ಚುನಾವಣಾ ಆಯೋಗವು ಮೇ-2021ರ ಮಾಹೆಯಲ್ಲಿ ಅವಧಿ ಮುಕ್ತಾಯವಾಗಲಿರುವ ಹಾಗೂ ವಿವಿಧ ಕಾರಣಗಳಿಂದ ತೆರವಾದ ಗ್ರಾ.ಪಂ ಸ್ಥಾನಗಳಿಗೆ ಚುನಾವಣೆ ನಡೆಸಲು ವೇಳಾ ಪಟ್ಟಿ ಪ್ರಕಟಿಸಿದ್ದು, ಮಾ.15 ರಂದು ಅಧಿಸೂಚನೆ ಹೊರಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 7 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗತ್ತಿದೆ. ಜಮಖಂಡಿ ತಾಲೂಕಿನ ಸಾವಳಗಿ, ತೊದಲಬಾಗಿ, ಬಾದಾಮಿ ತಾಲೂಕಿನ ಕೆಂದೂರ, ಹುನಗುಂದ ತಾಲೂಕಿನ ಹಿರೇಬಾದವಾಡಗಿ, ಅಮರಾವತಿ, ಬೀಳಗಿ ತಾಲೂಕಿನ ಇನಾಂ ಹಂಚಿನಾಳ, ಬಾಡಗಂಡಿ ಗ್ರಾ.ಪಂಗಳಿಗೆ ಚುನಾವಣೆ ನಡೆಸಲಾಗುತ್ತಿದೆ.

ಮಾ.19 ನಾಮಪತ್ರ ಸಲ್ಲಿಸುವ ಕೊನೆ ದಿನವಾಗಿದೆ. ಮಾ.20 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಮಾ.22 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಮಾ.29 ರಂದು ಬೆಳಗ್ಗೆ 7 ಗಂಟೆಗೆ ಸಂಜೆ 5 ಗಂಟೆ ವರೆಗೆ ಮತದಾನ ನಡೆಯಲಿದೆ. ಮಾ.31 ರಂದು ಮತ ಎಣಿಕೆ ನಡೆಸಲಾಗುತ್ತದೆ. ಚುನಾವಣೆ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾ.15 ರಿಂದ 31 ವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net