

ಬಾಗಲಕೋಟೆ: ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಎಚ್.ವಿ. ಶಿವಶಂಕರ್ ನವನಗರದ ಮೆಟ್ರಿಕ್ ನಂತರದ ವಿವಿಧ ವಸತಿ ನಿಲಯ, ಅಂಗನವಾಡಿ ಕೇಂದ್ರ ಹಾಗೂ ನ್ಯಾಯ ಬೆಲೆ ಅಂಗಡಿಗಳಿಗೆ ಭೇಟಿ ಪರಿಶೀಲನೆ ನಡೆಸಿದರು.
ಸೋಮವಾರ ನವನಗರದ ವಾಂಬೆ ಕಾಲೋನಿಯಲ್ಲಿರುವ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳಿಗೆ, ಗರ್ಭಿಣಿ ಮಹಿಳೆಯರಿಗೆ ಆಹಾರ ಪದಾರ್ಥಗಳನ್ನು ಅವರ ಮನೆಗಳಿಗೆ ತಲುಪಿಸುತ್ತಿರುವ ಬಗ್ಗೆ ಮಾಹಿತಿ ಪಡೆದರು.
ನಂತರ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಪರಿಶಿಷ್ಟ ವರ್ಗದ ಬಾಲಕಿಯರ ವಸತಿ ನಿಲಯ, ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳಿಗೆ ಭೇಟಿ ನೀಡಿ ಆಹಾರ ದಾಸ್ತು ಕೋಣೆ, ಅಡುಗೆ ಮನೆ, ವಿದ್ಯಾರ್ಥಿಗಳ ಕೋಣೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ವಸತಿ ನಿಲಯ ವಿದ್ಯಾರ್ಥಿಗಳಿಂದ ಊಟ, ಸೌಲಭ್ಯ ಸರಿಯಾಗಿ ನೀಡುತ್ತಿರುವ ಬಗ್ಗೆ ವಿಚಾರಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ವಿದ್ಯಾರ್ಥಿಗಳು ಯಾವುದೇ ರೀತಿಯ ತೊಂದರೆ ಇಲ್ಲ. ಸರಿಯಾದ ರೀತಿಯಲ್ಲಿ ನೋಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು. ನಂತರ ನ್ಯಾಯಬೆಲೆ ಅಂಗಡಿಗೆ ತೆರೆಳಿದ ಆಯೋಗದ ಅಧ್ಯಕ್ಷ ಶಿವ ಶಂಕರ ಅಲ್ಲಿರುವ ಆಹಾರ ದಾನ್ಯಗಳನ್ನು ಪರಿಶೀಲಿಸಿದರು. ಕೋವಿಡ್ ಹಿನ್ನಲೆಯಲ್ಲಿ ಪಡಿತರ ಪಡೆದುಕೊಳ್ಳುವಾಗ ಪರಸ್ಪರ ಅಂತರ ಕಾಯ್ದುಕೊಳ್ಳಬೇಕು. ಸರಿಯಾಗಿ ಪಡಿತರ ವಿತರಿಸಬೇಕು. ಯಾವುದೇ ಅವ್ಯವಹಾರಕ್ಕೆ ಅವಕಾಶ ನೀಡಬೇಡಿ ಎಂದು ಸೂಚನೆ ನೀಡಿದರು.
ವಿವಿಧೆಡೆ ಭೇಟಿ ಸಮಯದಲ್ಲಿ ವಸತಿ ನಿಲಯ ಮಕ್ಕಳ ಹಾಜರಾತಿ, ಆಹಾರ ಧಾನ್ಯ ಸಂಗ್ರಹಣೆ ರಿಜಿಸ್ಟರ ಸೇರಿದಂತೆ ವಿವಿಧ ಕಡತಗಳನ್ನು ಪರಿಶೀಲನೆ ನಡೆಸಿ ವಿದ್ಯಾರ್ಥಿಗಳಿಗೆ ಉತ್ತಮ ಆಹಾರ ಪೂರೈಸಬೇಕು. ಅವರಿಗೆ ಸಿಗಬೇಕಾದ ಎಲ್ಲ ರೀತಿಯ ಸೌಲಭ್ಯ ನೀಡಬೇಕು. ಸ್ವಚ್ಛತೆಗೆ ಹೆಚ್ಚಿನ ಗಮನಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಅಲ್ಲದೆ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿ ರೈತರಿಗೆ ವಿವಿಧ ಸಾಮಗ್ರಿಗಳನ್ನು ವಿತರಿಸಿದರು. ನಂತರ ತಾಲೂಕಾ ಎಂ.ಎಸ್.ಪಿ.ಟಿ.ಸಿ. ಕೇಂದ್ರಕ್ಕೆ ಭೇಟಿ ನೀಡಿ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಆಗುತ್ತಿರುವ ಆಹಾರ ಪದಾರ್ಥಗಳನ್ನು ಪರಿಶೀಲನೆ ನಡೆಸಿದರು.
ಭೇಟಿ ಸಂದರ್ಭದಲ್ಲಿ ರಾಜ್ಯ ಆಹಾರ ಆಯೋಗದ ಸದಸ್ಯೆ ಮಂಜುಳಾ ಸಾತನೂರ, ಆಹಾರ ಇಲಾಖೆಯ ಉಪ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಂಜುನಾಥ ಡೊಂಬರ, ಕೃಷಿ ಇಲಾಖೆ ಉಪನಿರ್ದೇಶಕ ಕೊಂಗವಾಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧ್ದಿ ಇಲಾಖೆ ಪ್ರಭಾರಿ ಉಪನಿರ್ದೇಶಕ ಎ.ಕೆ. ಬಸಣ್ಣವರ, ತಾಲೂಕಾ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ತಹೀರಾಬಾನು ನದ್ಾ, ಶಿಶು ಅಭಿವೃದ್ಧ್ದಿ ಯೋಜನಾಧಿಕಾರಿ ಶಿಲ್ಪಾ ಹಿರೇಮಠ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.
21 ರಂದು ಸಾರ್ವಜನಿಕ ಅಹವಾಲು ಸ್ವೀಕಾರ
ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಎಚ್.ವಿ. ಶಿವಶಂಕರ ಜ.21 ರಂದು ಮಧ್ಯಾಹ್ನ 12.30ಕ್ಕೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಯೋಜನೆಗಳ ಅನುಷ್ಠಾನದ ಬಗ್ಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.
ಅಧ್ಯಕ್ಷರ ಜಿಲ್ಲಾ ಪ್ರವಾಸದ ವಿವರ
ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಎಚ್.ವಿ. ಶಿವಶಂಕರ ಬಾಗಲಕೋಟೆಯಲ್ಲಿ ಜ.21 ವರೆಗೆ ಪ್ರವಾಸ ಕೈಗೊಂಡಿದ್ದು, ಜ.19 ಮತ್ತು 20 ರಂದು ವಿವಿಧ ತಾಲೂಕಾ ಇಲಾಖೆಗಳ ಪರಿಶೀಲನೆ ನಡೆಸಲಿದ್ದಾರೆ. 21 ರಂದು ಬೆಳಗ್ಗೆ 10ಕ್ಕೆ ಜಿಲ್ಲಾ ಆಸ್ಪತ್ರೆಯಲ್ಲಿರುವ ಎನ್.ಆರ್.ಸಿ. ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವರು. 11 ಗಂಟೆಗೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅನುಷ್ಠಾನದ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸುವರು. ಮಧ್ಯಾಹ್ನ 12.30ಕ್ಕೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
EndFragment