18 ವರ್ಷ ಮೇಲ್ಪಟ್ಟ ಅಂಗವಿಕಲರಿಗೆ ಕೋವಿಡ್ ಲಸಿಕೆ

Vaccine
Published on

ಬಾಗಲಕೋಟೆ: ಉಚ್ಚ ನ್ಯಾಯಾಲಯ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ ಕೋವಿಡ್ ಸಾಂಕ್ರಾಮಿಕ ರೋಗದಿಂದ ಅಂಗವಿಕಲರನ್ನು ರಕ್ಷಿಸಲು 18 ವರ್ಷ ಮೇಲ್ಪಟ್ಟ ಎಲ್ಲ ಅಂಗವಿಕಲರು ಹಾಗೂ ಅಂಗವಿಕಲರ ಒಬ್ಬ ಆರೈಕೆದಾರರಿಗೆ ಕೋವಿಡ್ ರೋಗ ನಿರೋಧಕ ಲಸಿಕೆ ನೀಡುವ ಕಾರ್ಯ ಜಿಲ್ಲೆಯಲ್ಲಿ ಪ್ರಾರಂಭಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ತಿಳಿಸಿದ್ದಾರೆ.

ಎಲ್ಲ ಅಂಗವಿಕಲರಿಗೆ ಕೋವಿಡ-19 ರೋಗ ನಿರೋಧಕ ಲಸಿಕೆಯನ್ನು ಜೂನ್ ತಿಂಗಳ ಅಂತ್ಯದೊಳಗೆ ಪಡೆಯಬೇಕು. ಪಡೆಯದೇ ಇರುವ ಅಂಗವಿಕಲರಿಗೆ ಮಾಶಾಸನವನ್ನು ತಡೆಹಿಡಿಯಲಾಗುವುದು ಎಂದು ಹೇಳಿದ್ದಾರೆ.

Community-verified icon
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net