ಬೆಳಗ್ಗೆಯಿಂದಲೇ ಪಟ್ಟಣದಲ್ಲಿನ ಎಲ್ಲ ಅಂಗಡಿ ಮುಂಗಟ್ಟುಗಳ ಮಾಲೀಕರು ಸ್ವಯಂ ಪ್ರೇರಿತರಾಗಿ ಅಂಗಡಿಗಳನ್ನು ಮುಚ್ಚಿದ್ದರು.
ಸಾರಿಗೆ ಬಸ್, ಖಾಸಗಿ ವಾಹನಗಳ ಸಂಚಾರವಿಲ್ಲದೆ ಪ್ರಯಾಣಿಕರು ಪರದಾಡಿದರು.
ಬಸ್ ನಿಲ್ದಾಣ ಬಿಕೋ ಎನ್ನುತ್ತಿತ್ತು.
ಮುದ್ದೇಬಿಹಾಳ: ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮೇಲೆ ಶೂ ಎಸೆತ, ದಲಿತ ಬಾಲಕಿ ಕೊಲೆ, ಬುದ್ಧ, ಅಂಬೇಡ್ಕರ್ ಮೂರ್ತಿಗೆ ಅವಮಾನಿಸಿದ ಕ್ರಮ ಖಂಡಿಸಿ ದಲಿತಪರ ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿದ್ದ ಮುದ್ದೇಬಿಹಾಳ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಬೆಳಗ್ಗೆಯಿಂದಲೇ ಪಟ್ಟಣದಲ್ಲಿನ ಎಲ್ಲ ಅಂಗಡಿ ಮುಂಗಟ್ಟುಗಳ ಮಾಲೀಕರು ಸ್ವಯಂ ಪ್ರೇರಿತರಾಗಿ ಅಂಗಡಿಗಳನ್ನು ಮುಚ್ಚಿದ್ದರು. ಸಾರಿಗೆ ಬಸ್, ಖಾಸಗಿ ವಾಹನಗಳ ಸಂಚಾರವಿಲ್ಲದೆ ಪ್ರಯಾಣಿಕರು ಪರದಾಡಿದರು. ಬಸ್ ನಿಲ್ದಾಣ ಬಿಕೋ ಎನ್ನುತ್ತಿತ್ತು.
ಬೆಳಗ್ಗೆ 9 ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾಕಾರರು ಮೆರವಣಿಗೆಯಲ್ಲಿ ಬಸವೇಶ್ವರ ವತ್ತಕ್ಕೆ ತೆರಳಿ ಅಲ್ಲಿ ಮಾನವ ಸರಪಳಿ ರಚಿಸಿ ಆಕ್ರೋಶ ವ್ಯಕ್ತಪಡಿಸಿದರು.
ದಲಿತ ಮುಖಂಡ ಹರೀಶ ನಾಟಿಕಾರ, ಚನ್ನಪ್ಪ ವಿಜಯಕರ, ಶಾಂತಗೌಡ ಪಾಟೀಲ(ನಡಹಳ್ಳಿ), ಮಲ್ಲಣ್ಣ ತಂಗಡಗಿ, ಪರುಶುರಾಮ ಕೊಣ್ಣೂರ ಮಾತನಾಡಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ಹಿರಿಯ ವಕೀಲ ರಾಕೇಶ್ ಕಿಶೋರ್ ಮೇಲೆ ದೇಶದ್ರೋಹಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕು.
ಮುದ್ದೇಬಿಹಾಳ ತಾಲೂಕಿನ ಗ್ರಾಮವೊಂದರಲ್ಲಿ ದಲಿತ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಮೈಸೂರು ಜಿಲ್ಲೆಯ ಚಾಮರಾಜನಗರದಲ್ಲಿ ಬುದ್ಧ, ಅಂಬೇಡ್ಕರ್ ಮೂರ್ತಿಗಳಿಗೆ ಅವಮಾನಿಸಿದ ಕಿಡಿಗೇಡಿಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.