ಕಬ್ಬಿನ ಬೆಳೆಗೆ ವೈಜ್ಞಾನಿಕ ಬೆಲೆ ಘೋಷಣೆಮಾಡಿ

ಮುಧೋಳ ನಗರದ ಸಂಗೋಳ್ಳಿ ರಾಯಣ್ಣ ಸರ್ಕಲ್ ಹತ್ತಿರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕಬ್ಬು ಬೆಳೆಗಾರರು ಸಭೆ ನಡೆಸಿದರು. ರೈತ ಸಂಘದ ಜಿಲ್ಲಾಧ್ಯಕ್ಷ ಬಸವಂತ ಕಾಂಬಳೆ, ಮುಖಂಡರಾದ ದುಂಡಪ್ಪ ಯರಗಟ್ಟಿ, ಮುತ್ತಪ್ಪ ಕೋಮಾರ, ಮಹೇಶಗೌಡ ಪಾಟೀಲ, ಹನಮಂತಗೌಡ ಪಾಟೀಲ ಇತರರಿದ್ದರು.
ಮುಧೋಳ ನಗರದ ಸಂಗೋಳ್ಳಿ ರಾಯಣ್ಣ ಸರ್ಕಲ್ ಹತ್ತಿರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕಬ್ಬು ಬೆಳೆಗಾರರು ಸಭೆ ನಡೆಸಿದರು. ರೈತ ಸಂಘದ ಜಿಲ್ಲಾಧ್ಯಕ್ಷ ಬಸವಂತ ಕಾಂಬಳೆ, ಮುಖಂಡರಾದ ದುಂಡಪ್ಪ ಯರಗಟ್ಟಿ, ಮುತ್ತಪ್ಪ ಕೋಮಾರ, ಮಹೇಶಗೌಡ ಪಾಟೀಲ, ಹನಮಂತಗೌಡ ಪಾಟೀಲ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಬೆಂಬಲ ವ್ಯಕ್ತಪಡಿಸಿದ ವಕೀಲರು
  • ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಮುತ್ತಪ್ಪ ಕೋಮಾರ ಮಾತನಾಡಿ, ಸಕ್ಕರೆ ಕಾರ್ಖಾನೆಗಳು ಕಬ್ಬಿನ ಬಾಕಿ ಬಿಲ್ ನೀಡಬೇಕು.
  • ಸರ್ಕಾರ, ಕಾರ್ಖಾನೆ ಮಾಲೀಕರು ಹಾಗೂ ರೈತರು ಸೇರಿ ಸೂಕ್ತ ದರ ಘೋಷಣೆ ಮಾಡಬೇಕು
ಮುಧೋಳ: ಕಬ್ಬಿನ ಬೆಳೆಗೆ ಪ್ರಸಕ್ತ ವರ್ಷ ವೈಜ್ಞಾನಿಕ ದರ ಘೋಷಣೆ ಮಾಡುವುದು ಹಾಗೂ ಹಿಂದಿನ ಬಾಕಿ ನೀಡಿ ಕಾರ್ಖಾನೆಗಳನ್ನು ಆರಂಭಿಸಬೇಕು ಎಂದು ಆಗ್ರಹಿಸಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಇರುವ ಜಿಎಲ್‌ಬಿಸಿ ಪ್ರವಾಸಿ ಮಂದಿರದ ಆವರಣದಲ್ಲಿ ಕಬ್ಬು ಬೆಳೆಗಾರರ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮಂಗಳವಾರ ಸಭೆ ಜರುಗಿತು.
ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಮುತ್ತಪ್ಪ ಕೋಮಾರ ಮಾತನಾಡಿ, ಸಕ್ಕರೆ ಕಾರ್ಖಾನೆಗಳು ಕಬ್ಬಿನ ಬಾಕಿ ಬಿಲ್ ನೀಡಬೇಕು. ಈ ಹಂಗಾಮಿನ ದರ ಘೋಷಣೆ ಮಾಡಿ ಕಾರ್ಖಾನೆ ಪ್ರಾರಂಭಿಸಬೇಕು ಎಂದು ಹೇಳಿದರು.
ಸರ್ಕಾರ, ಕಾರ್ಖಾನೆ ಮಾಲೀಕರು ಹಾಗೂ ರೈತರು ಸೇರಿ ಸೂಕ್ತ ದರ ಘೋಷಣೆ ಮಾಡಬೇಕು, ಬಾಕಿ ಹಣ ಕೂಡಲೇ ರೈತರ ಖಾತೆಗೆ ಜಮಾ ಮಾಡಬೇಕು. ಬಾಕಿ ನೀಡದ ಹೊರತು ಕಾರ್ಖಾನೆ ಆರಂಭಕ್ಕೆ ಅವಕಾಶ ನೀಡಬಾರದು ಎಂದು ಆಕ್ರೋಶ ಹೊರಹಾಕಿದರು. ಹೋರಾಟಕ್ಕೆ ವಕೀಲರ ಸಂಘ ಸಹಕಾರ ನೀಡುವದಾಗಿ ಘೋಷಣೆ ಮಾಡಿದೆ.
ರೈತ ಸಂಘದ ಜಿಲ್ಲಾಧ್ಯಕ್ಷ ಬಸವಂತ ಕಾಂಬಳೆ, ರೈತ ಮುಖಂಡರಾದ ದುಂಡಪ್ಪ ಯರಗಟ್ಟಿ, ಮುತ್ತಪ್ಪ ಕೊಮಾರ, ಮಹೇಶಗೌಡ ಪಾಟೀಲ, ಹನಮಂತಗೌಡ ಪಾಟೀಲ, ಬಸಪ್ಪ ಸಂಗಣ್ಣವರ, ಮಲ್ಲು ರಡ್ಯಾರಟ್ಟಿ, ನಾಗಪ್ಪ ಪೂಜಾರಿ, ರಾಚಣ್ಣ ಕಣಬೂರ, ಹಣಮಂತ ನವಾಬ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net