ಸಿಬ್ಬಂದಿಗೆ 2ನೇ ಹಂತದ ಮತ ಎಣಿಕೆ ತರಬೇತಿ

ಬಾಗಲಕೋಟೆ ಉಪ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಭಾನುವಾರ ಜಿಲ್ಲಾಧಿಕಾರಿ ಸಂಗಪ್ಪ ನೇತೃತ್ವ ಹಾಗೂ ಸಾಮಾನ್ಯ ವಿಕ್ಷಕಿ ಪಾರುಲ್ ಪಟವಾರಿ ಸಮ್ಮುಖದಲ್ಲಿ ಮತ ಎಣಿಕೆಯ 2ನೇ ಹಂತದ ತರಬೇತಿ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆಯಿತು.
ಬಾಗಲಕೋಟೆ ಉಪ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಭಾನುವಾರ ಜಿಲ್ಲಾಧಿಕಾರಿ ಸಂಗಪ್ಪ ನೇತೃತ್ವ ಹಾಗೂ ಸಾಮಾನ್ಯ ವಿಕ್ಷಕಿ ಪಾರುಲ್ ಪಟವಾರಿ ಸಮ್ಮುಖದಲ್ಲಿ ಮತ ಎಣಿಕೆಯ 2ನೇ ಹಂತದ ತರಬೇತಿ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಬಾಗಲಕೋಟೆ ಉಪ ಚುನಾವಣೆಯ ಮತ ಎಣಿಕೆ
  • ಮತ ಎಣಿಕೆಯ 2ನೇ ಹಂತದ ತರಬೇತಿ
ಬಾಗಲಕೋಟೆ: ಬಾಗಲಕೋಟೆ ಉಪ ಚುನಾವಣೆಯ ಮತ ಎಣಿಕೆ ಕಾರ್ಯವೂ ಸುಗಮವಾಗಿ ಹಾಗೂ ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಮತ ಎಣಿಕೆಯ 2ನೇ ಹಂತದ ತರಬೇತಿ ಕಾರ್ಯಕ್ರಮ ಭಾನುವಾರ ನಡೆಯಿತು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಸಂಗಪ್ಪ ನೇತೃತ್ವದಲ್ಲಿ ಹಾಗೂ ಉಪ ಚುನಾವಣೆಯ ಸಾಮಾನ್ಯ ವೀಕ್ಷಕ ಪಾರುಲ್ ಪಟವಾರಿ ಅವರ ಸಮ್ಮುಖದಲ್ಲಿ ಮತ ಎಣಿಕೆಯ 2ನೇ ಹಂತದ ತರಬೇತಿ ನೀಡಲಾಯಿತು.
ತರಬೇತಿಯಲ್ಲಿ ಮತ ಎಣಿಕೆ ಸಿಬ್ಬಂದಿಗೆ ಮತ ಎಣಿಕೆಯ ಪ್ರಕ್ರಿಯೆ, ಇವಿಎಂ ಮತ್ತು ವಿವಿಪ್ಯಾಟ್ ಯಂತ್ರಗಳ ಬಳಕೆ, ಮತ ಎಣಿಕೆಯ ವೇಳೆ ಪಾಲಿಸಬೇಕಾದ ಮಾರ್ಗಸೂಚಿಗಳು ಹಾಗೂ ಮಾರ್ಗಸೂಚಿಯ ಕುರಿತು ವಿವರವಾದ ಮಾಹಿತಿ ನೀಡಲಾಯಿತು. ಪ್ರತಿ ಹಂತದಲ್ಲಿಯೂ ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಲಾಯಿತು.
ತರಬೇತಿಯಲ್ಲಿ ವಿಶೇಷವಾಗಿ ಮತ ಎಣಿಕೆ ಟೇಬಲ್ ವ್ಯವಸ್ಥೆ, ಫಲಿತಾಂಶ ದಾಖಲಿಸುವ ವಿಧಾನ, ಅಂತಿಮ ಫಲಿತಾಂಶ ಘೋಷಣೆ ಪ್ರಕ್ರಿಯೆ ಕುರಿತು ತಿಳಿಸಿಕೊಡಲಾಯಿತು. ಸಿಬ್ಬಂದಿಗೆ ಯಾವುದೇ ಗೊಂದಲವಿಲ್ಲದೇ ತಮ್ಮ ಕರ್ತವ್ಯವನ್ನು ನಿರ್ವಹಿಸುವಂತೆ ತಿಳಿಸಲಾಯಿತು.
ಮಾಸ್ಟರ್ ಟ್ರೈನರ್ ಸಣತಂಗಿ ತರಬೇತಿ ನೀಡಿದರು. ತರಬೇತಿಯಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಉಪ ವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿ ಸಂತೋಷ ಜಗಲಾಸರ, ತಹಸೀಲ್ದಾರ ವಾಸುದೇವ ಸ್ವಾಮಿ ಉಪಸ್ಥಿತರಿದ್ದರು. ತರಬೇತಿ ಕಾರ್ಯದಲ್ಲಿ ಮತ ಎಣಿಕೆ ಮೇಲ್ವಿಚಾರಕರು, ಸಹಾಯಕ ಹಾಗೂ ಮೈಕ್ರೋ ಆಬ್ಸರ್‌ವರ್ ಪಾಲ್ಗೊಂಡಿದ್ದರು.
"

ಮತ ಎಣಿಕೆ ಪ್ರಕ್ರಿಯೆ ಅತ್ಯಂತ ಮಹತ್ವದ್ದಾಗಿದ್ದು, ಪ್ರತಿಯೊಬ್ಬ ಸಿಬ್ಬಂದಿಯೂ ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಯಾವುದೇ ಗೊಂದಲಕ್ಕೆ ಅವಕಾಶ ಕೊಡಬಾರದು.

— | ಸಂಗಪ್ಪ, ಜಿಲ್ಲಾಧಿಕಾರಿ, ಬಾಗಲಕೋಟೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net