ಮಹಾಂತ ಶಿವಯೋಗಿಗಳ ಸಮಾಜಕ್ಕೆ ದಾರಿದೀಪ

 ರಬಕವಿ ನಗರದ ಮಲ್ಲಿಕಾರ್ಜುನ ಸಮುದಾಯ ಭವನದಲ್ಲಿ ಶ್ರಾವಣ ಮಾಸದ ನಿಮಿತ್ತ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಗುರುಸಿದ್ಧೇಶ್ವರ ಸ್ವಾಮೀಜಿ ಪ್ರವಚನ ನೀಡಿದರು.
ರಬಕವಿ ನಗರದ ಮಲ್ಲಿಕಾರ್ಜುನ ಸಮುದಾಯ ಭವನದಲ್ಲಿ ಶ್ರಾವಣ ಮಾಸದ ನಿಮಿತ್ತ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಗುರುಸಿದ್ಧೇಶ್ವರ ಸ್ವಾಮೀಜಿ ಪ್ರವಚನ ನೀಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಗುರುಸಿದ್ಧೇಶ್ವರ ಸ್ವಾಮೀಜಿ ಹೇಳಿಕೆ
  • ಧಾರ್ಮಿಕ ಕಾರ್ಯಕ್ರಮ
  • ಮುಳಗುಂದದ ಬಾಲಲೀಲಾ ಮಹಾಂತ ಶಿವಯೋಗಿಗಳ ಕುರಿತು ಪ್ರವಚನ ಕಾರ್ಯಕ್ರಮ
ರಬಕವಿ-ಬನಹಟ್ಟಿ:

ಮುಳಗುಂದದ ಬಾಲಲೀಲಾ ಮಹಾಂತ ಶಿವಯೋಗಿಗಳ ಜೀವನ, ಸಾಧನೆ ಹಾಗೂ ಸಮಾಜಮುಖಿ ಚಿಂತನೆಗಳು ಇಂದಿನ ಸಮಾಜಕ್ಕೆ ದಾರಿದೀಪವಾಗಿವೆ. ಅವರ ಜೀವನ ಸಂದೇಶ ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ರಬಕವಿ ಗುರುದೇವ ಬ್ರಹ್ಮಾನಂದ ಆಶ್ರಮದ ಗುರುಸಿದ್ಧೇಶ್ವರ ಶ್ರೀಗಳು ಹೇಳಿದರು.

ನಗರದ ಮಲ್ಲಿಕಾರ್ಜುನ ಸಮುದಾಯ ಭವನದಲ್ಲಿ ಮಂಗಳವಾರ ರಾತ್ರಿ ಶ್ರಾವಣ ಮಾಸದ ನಿಮಿತ್ತ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಮುಳಗುಂದದ ಬಾಲಲೀಲಾ ಮಹಾಂತ ಶಿವಯೋಗಿಗಳ ಕುರಿತು ಪ್ರವಚನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬಾಲಲೀಲಾ ಮಹಾಂತ ಶಿವಯೋಗಿಗಳ ಬದುಕು ಕೇವಲ ಆಧ್ಯಾತ್ಮಿಕ ಸಾಧನೆಗೆ ಸೀಮಿತವಾಗಿರಲಿಲ್ಲ. ಸಮಾಜದಲ್ಲಿದ್ದ ಮೇಲು ಕೀಳು ಭಾವನೆಗಳನ್ನು ತೊಡೆದುಹಾಕಿ, ಎಲ್ಲರೂ ಸಮಾನರು ಎಂಬ ಸಂದೇಶವನ್ನು ಜನರಿಗೆ ಸಾರಿದ ಮಹಾನ್ ಸಂತರು. ಅವರ ಜೀವನದಲ್ಲಿ ನಡೆದ ಅನೇಕ ಘಟನೆಗಳು ಭಕ್ತರಲ್ಲಿ ಆಧ್ಯಾತ್ಮಿಕ ಜಾಗೃತಿ ಮೂಡಿಸುವಂತಿವೆ ಎಂದು ತಿಳಿಸಿದರು.
ಗುರುವಿನ ಆಶೀರ್ವಾದದಿಂದ ಜನಿಸಿದ ಬಾಲಲೀಲಾ ಮಹಾಂತ ಶಿವಯೋಗಿಗಳು ಸಮಾಜದಲ್ಲಿ ಭಕ್ತಿ, ಸದಾಚಾರ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಲು ಶ್ರಮಿಸಿದರು. ಗುರು ಲಿಂಗ ಜಂಗಮ ತತ್ವದ ಮಹತ್ವವನ್ನು ಸಾರಿದ ಅವರು, ಮನುಷ್ಯನು ತನ್ನ ಅಂತರಂಗವನ್ನು ಶುದ್ಧಗೊಳಿಸಿಕೊಂಡು ಸತ್ಯ, ಧರ್ಮ ಹಾಗೂ ನೀತಿಯ ಮಾರ್ಗದಲ್ಲಿ ಸಾಗಬೇಕು ಎಂಬ ಸಂದೇಶ ನೀಡಿದರು ಎಂದು ವಿವರಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net