ಸಿಎಂ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಕಾಣಿಸಿದ ಶಿಕ್ಷಕ

ಬಾಗಲಕೋಟೆ ತಾಲೂಕಿನ ಸುತಗುಂಡಾರ ಗ್ರಾಮದಲ್ಲಿ ಸೋಮವಾರ ಮುಖ್ಯಮಂತ್ರಿಗಳು ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಪರ ಚುನಾವಣಾ ಸಭೆಯಲ್ಲಿ ಕಾಣಿಸಿಕೊಂಡ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಲಿ ಅವರನ್ನು ಮಾಧ್ಯಮದವರು ಪ್ರಶ್ನಿಸಲು ಮುಂದಾದಾಗ ಮುಖ ಮುಚ್ಚಿಕೊಂಡು ಹೊರಟಿರುವುದು.
ಬಾಗಲಕೋಟೆ ತಾಲೂಕಿನ ಸುತಗುಂಡಾರ ಗ್ರಾಮದಲ್ಲಿ ಸೋಮವಾರ ಮುಖ್ಯಮಂತ್ರಿಗಳು ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಪರ ಚುನಾವಣಾ ಸಭೆಯಲ್ಲಿ ಕಾಣಿಸಿಕೊಂಡ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಲಿ ಅವರನ್ನು ಮಾಧ್ಯಮದವರು ಪ್ರಶ್ನಿಸಲು ಮುಂದಾದಾಗ ಮುಖ ಮುಚ್ಚಿಕೊಂಡು ಹೊರಟಿರುವುದು.
Published on
ಬಾಗಲಕೋಟೆ: ಬಾಗಲಕೋಟೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಸೋಮವಾರ ಸುತಗುಂಡಾರ ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಪರ ಪ್ರಚಾರ ಸಭೆಯಲ್ಲಿ ಕಾಣಿಸಿಕೊಂಡ ಪ್ರಾಥಮಿಕ ಶಾಲಾ ಶಿಕ್ಷಕ ಚಂದ್ರಶೇಖರ ನುಗ್ಲಿ ಚುನಾವಣೆ ನೀತಿ ಸಂಹಿತೆ ಉಲ್ಲಂöಸಿರುವ ಆರೋಪ ಕೇಳಿ ಬಂದಿದೆ.
ಚಂದ್ರಶೇಖರ ನುಗ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಅಧ್ಯಕ್ಷರಾಗಿದ್ದಾರೆ. ಆಲಮಟ್ಟಿ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿರುವ ಅವರು, ಬೆಂಗಳೂರ ನಿಯೋಜನೆ ಆಗಿದ್ದಾರೆ. ಸೋಮವಾರ ಸುತಗುಂಡಾರದ ಕಾಂಗ್ರೆಸ್ ಪಕ್ಷದ ಪ್ರಚಾರ ಸಭೆಯಲ್ಲಿ ಭಾಗಿ ಯಾಗಿದ್ದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಕಾಣಿಸಿದ್ದರಿಂದ ಕೆಲವರು ಅವರ ವಿಡಿಯೋ ಮಾಡಲು ಮುಂದಾಗುತ್ತಿದ್ದAತೆ ಅಲ್ಲಿಂದ ಕಾಲ್ಕಿತ್ತರು. ತಮ್ಮ ಮುಖ ಮುಚ್ಚಿಕೊಂಡು ಮಾಸ್ಕ್ ಹಾಕಿಕೊಂಡ ಚಂದ್ರಶೇಖರ ನುಗ್ಲಿ, ಮಾಧ್ಯಮದವರು ಪ್ರಶ್ನೆಗೆ ಉತ್ತರಿಸಿದ ಅಲ್ಲಿಂದ ನಿರ್ಗಮಿಸಿದರು.
ಶಿಕ್ಷಕ ಚಂದ್ರಶೇಖರ ನುಗ್ಲಿ ಅವರು ಮುಖ್ಯಮಂತ್ರಿ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗಿಯಾಗಿರುವ ವಿಡಿಯೋಗಳು ಹರಿದಾಡುತ್ತಿರುವುದು ಜಿಲ್ಲಾ ಚುನಾವಣಾಽಕಾರಿಗಳ ಗಮನಕ್ಕೆ ಬಂದಿದೆ. ಶಿಕ್ಷಕರಿಂದ ನೀತಿ ಸಂಹಿತೆ ಉಲ್ಲಂಘನೆ ಆಗಿದೆಯಾ ಎನ್ನುವ ಕುರಿತು ಪರಿಶೀಲಿಸಿ ವರದಿ ನೀಡುವಂತೆ ಅಽಕಾರಿಗಳಿಗೆ ಸೂಚಿಸಲಾಗಿದೆ. ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾ ಅಽಕಾರಿ, ಜಿಲ್ಲಾಽಕಾರಿ ಸಂಗಪ್ಪ ಹೇಳಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net