ಭಾರತ ಜೋಡೋ ಯುವ ಸಂಘ ಸ್ಥಾಪನೆ ಕಾರ್ಯ ತ್ವರಿತಗೊಳಿಸಿ

ಬಾಗಲಕೋಟೆ ಜಿಲ್ಲಾಽಕಾರಿ ಸಭಾಭವನದಲ್ಲಿ ಸೋಮವಾರ ಭಾರತ ಜೋಡೋ ಯುವ ಸಂಘ ಸ್ಥಾಪನೆ ಕುರಿತು ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆ ಜಿಲ್ಲಾಽಕಾರಿ ಸಂಗಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಪಂ ಸಿಇಒ ಗಜಾನನ ಬಾಲೆ, ಎಡಿಸಿ ಅಶೋಕ ತೇಲಿ ಇತರರು ಇದ್ದರು.
ಬಾಗಲಕೋಟೆ ಜಿಲ್ಲಾಽಕಾರಿ ಸಭಾಭವನದಲ್ಲಿ ಸೋಮವಾರ ಭಾರತ ಜೋಡೋ ಯುವ ಸಂಘ ಸ್ಥಾಪನೆ ಕುರಿತು ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆ ಜಿಲ್ಲಾಽಕಾರಿ ಸಂಗಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಪಂ ಸಿಇಒ ಗಜಾನನ ಬಾಲೆ, ಎಡಿಸಿ ಅಶೋಕ ತೇಲಿ ಇತರರು ಇದ್ದರು.
Published on

ಜಿಲ್ಲೆಯಾದ್ಯಂತ ಭಾರತ ಜೋಡೋ ಸಂಘಗಳ ಸ್ಥಾಪನೆಗೆ ಬೇಕಾಗುವ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಽಕಾರಿ ಸಂಗಪ್ಪ ಅವರು ಸಂಬAಽಸಿದ ಅಽಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಽಕಾರಿಗಳ ಸಭಾಭವನದಲ್ಲಿ ಸೋಮವಾರ ಭಾರತ ಜೋಡೋ ಯುವ ಸಂಘ ಸ್ಥಾಪನೆ ಕುರಿತು ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಒಟ್ಟು ೧೯೬ ಗ್ರಾಮ ಪಂಚಾಯಿತಿಗಳಿದ್ದು, ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಂದರAತೆ, ಪಟ್ಟಣ ಪಂಚಾಯಿತಿಗೆ ೪ ಸಾವಿರ ಜನಸಂಖ್ಯೆಗೆ ಒಂದು ಸಂಘ, ಪ್ರತಿ ಪುರಸಭೆಯಲ್ಲಿ ೬ ಸಾವಿರ ಜನಸಂಖ್ಯೆಗೆ ಒಂದು ಸಂಘ ಹಾಗೂ ಪ್ರತಿ ನಗರಸಭೆ ವ್ಯಾಪ್ತಿಯಲ್ಲಿ ೮ ಸಾವಿರ ಜನಸಂಖ್ಯೆಗೆ ಒಂದು ಸಂಘದAತೆ ಜಿಲ್ಲೆಯಲ್ಲಿ ಒಟ್ಟು ೨೯೬ ಸಂಘಗಳನ್ನು ಸ್ಥಾಪಿಸಬೇಕಿದೆ ಎಂದರು.
ಪ್ರತಿಯೊAದು ಸಂಘಗಳಿಗೆ ಪಂಚಾಯಿತಿ ವ್ಯಾಪ್ತಿಯಲ್ಲಿ ಯುವ ಸಂಘಕ್ಕಾಗಿ ಸದಸ್ಯರ ಪಟ್ಟಿ ಆಗಬೇಕು. ಇದರ ಜೊತೆಗೆ ಸ್ಥಳಗಳನ್ನು ಗುರುತಿಸಿ ಪಟ್ಟಿ ಸಿದ್ದವಾಗಿ ಇಟ್ಟುಕೊಳ್ಳಬೇಕು. ಆಗಸ್ಟ ೬ ರಿಂದ ಸಂಘಗಳ ನೋಂದಣಿ ಕಾರ್ಯ ಪ್ರಾರಂಭವಾಗಲಿದ್ದು, ಭಾರತ ಜೋಡೋ ಯುವ ಸಂಘಗಳ ನೋಂದಣಿಗೆ ಬೇಕಾಗುವ ಎಲ್ಲ ಸಿದ್ದತೆಗಳನ್ನು ಆಯಾ ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಮಾಡಿಕೊಳ್ಳಬೇಕು. ಮುಂದಿನ ಮೂರು ದಿನಗಳಲ್ಲಿ ಪ್ರತಿ ಸಂಘಕ್ಕೆ ಒಬ್ಬರಂತೆ ಮೆಂಟರ ಹಾಗೂ ಮೇಲ್ವಿಚಾರಕರನ್ನು ನಿಯೋಜನೆಗೆ ಕ್ರಮಕೈಗೊಳ್ಳಲು ಸೂಚಿಸಿದರು. ಸಂಘದ ಸದ್ಯರಿಗೆ ತರಬೇತಿ ನೀಡುವ ಸಲವಾಗಿ ಮಾಸ್ಟರ ಟ್ರೆÊನರ್‌ಗಳನ್ನು ನೇಮಿಸಲು ತಿಳಿಸಿದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಗಜಾನನ ಬಾಲೆ ಅವರು, ಜಿಲ್ಲೆಯ ಎಲ್ಲ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಘಗಳ ರಚನೆ, ನೋಂದಣಿ ಹಾಗೂ ಅಽಕಾರಿಗಳ ನೇಮಕಾತಿ ಕಾರ್ಯವನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ, ಪ್ರಗತಿ ವರದಿಯನ್ನು ಜಿಲ್ಲಾ ಉಸ್ತುವಾರಿ ಸಮಿತಿಗೆ ಸಲ್ಲಿಸುವಂತೆ ಸಂಬAಽಸಿದ ಅಽಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಽಕಾರಿ ಅಶೋಕ ತೇಲಿ, ಜಿಪಂ ಯೋಜನಾ ನಿರ್ದೇಶಕ ಸಿದ್ದರಾಮೇಶ್ವರ ಉಕ್ಕಲಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ಎಂ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಜೀತ ಮನ್ನಿಕೇರಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಕಾಂಬಳೆ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸದಾಶಿವ ಬಡಿಗೇರ, ಹಿಂದುಳಿದ ವರ್ಗಗಳ ಕಲ್ಯಾಣಾಽಕಾರಿ ಪಂಕಜ, ಅಲ್ಪಸಂಖ್ಯಾತರ ಕಲ್ಯಾಣಾಽಕಾರಿ ಪ್ರೀತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net