ಬಾಗಲಕೋಟೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಎಸ್‌ಐಆರ್ ಪ್ರಗತಿ ಕುರಿತು ವಿವಿಧ ರಾಜಕೀಯ ಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿ ಸಂಗಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ತಹಸೀಲ್ದಾರ್ ವಾಸುದೇವ ಸ್ವಾಮಿ, ಚುನಾವಣಾ ವಿಭಾಗದ ಶಿರಸ್ತೇದಾರ ಮಹೇಶ ಪಾಂಡವ, ನಾಗರಾಜ ಹದ್ಲಿ, ಮಹಾಂತೇಶ ಮಾವಿನಮರದ, ಪ್ರಭು ಹಳ್ಳೂರ ಇತರರಿದ್ದರು.
ಬಾಗಲಕೋಟೆ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಅಂಗವಾಗಿ ಜಿಲ್ಲಾದ್ಯಂತ ನಡೆದ ಅಭಿಯಾನವನ್ನು ಚುರುಕುಗೊಳಿಸಿ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಸಂಗಪ್ಪ ಅವರು ಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಜಿಲ್ಲೆಯಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಗತಿ ಕುರಿತು ವಿವಿಧ ರಾಜಕೀಯ ಪ್ರತಿನಿಽಗಳೊಂದಿಗೆ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೂತ್ ಮಟ್ಟದ ಅಧಿಕಾರಿಗಳು, ಮೇಲ್ವಿಚಾರಕರನ್ನೊಳಗೊಂಡ ತಂಡ ಈಗಾಗಲೇ ಮನೆ ಮನೆಗೆ ತೆರಳಿ ಶೇ.95ರಷ್ಟು ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಣೆ ಮಾಡಿದ್ದಾರೆ. ಈ ಪೈಕಿ ಶೇ.17.85ರಷ್ಟು ಡಿಜಿಟೈಜೇಷನ್ ಮಾಡಲಾಗಿದೆ. ಡಿಜಿಟೈಜೇಷನ್ ಪ್ರಗತಿಗೆ ಚುರುಕು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಈ ವಿಶೇಷ ಅಭಿಯಾನದಲ್ಲಿ ಬೂತ್ ಮಟ್ಟದ ಅಧಿಕಾರಿಗಳು, ಗ್ರಾಮ ಲೆಕ್ಕಾಽಕಾರಿಗಳು, ಕಂದಾಯ ನಿರೀಕ್ಷಕರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಽಕಾರಿಗಳು, ನೋಡಲ್ ಅಧಿಕಾರಿಗಳು ಶನಿವಾರ ಮತ್ತು ಭಾನುವಾರ ರಜೆ ಎಂದು ಭಾವಿಸದೇ ಹೆಚ್ಚಿನ ಪ್ರಗತಿ ಸಾಧಿಸಲು ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಸೂಕ್ತ ಶಿಸ್ತುಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಎನ್ಯುಮರೇಷನ್ ಫಾರ್ಮ್ಗಳು ಆಯಾ ಮತಕ್ಷೇತ್ರದಲ್ಲಿ ಶೇ.90ಕ್ಕಿಂತ ಹೆಚ್ಚು ವಿತರಣೆಯಾಗಿವೆ. ಆದರೆ, ಡಿಜಿಟೈಜೇಷನ್‌ದಲ್ಲಿ ಬಹಳ ಕಡಿಮೆಯಾಗಿದ್ದು, ಡಿಜಿಟೈಜೇಷನ್‌ಗೆ ಹೆಚ್ಚಿನ ಒತ್ತುಕೊಟ್ಟು ಈ ಕಾರ್ಯ ಪೂರ್ಣಗೊಳಿಸಬೇಕು. ಕಡಿಮೆ ಪ್ರಗತಿ ಸಾಧಿಸಿದ ತಾಲೂಕುಗಳಿಗೆ ಹೆಚ್ಚಿನ ಮುತುವರ್ಜಿ ವಹಿಸಿ ಪ್ರಗತಿಗೆ ಕ್ರಮಕೈಗೊಳ್ಳುವಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಚುನಾವಣಾ ಆಯೋಗದ ಮಾರ್ಗಸೂಚಿಗಳ ಅನುಸಾರ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ತಹಸೀಲ್ದಾರ್ ವಾಸುದೇವ ಸ್ವಾಮಿ, ಚುನಾವಣಾ ವಿಭಾಗದ ಶಿರಸ್ತೇದಾರ ಮಹೇಶ ಪಾಂಡವ ಸೇರಿ ವಿವಿಧ ರಾಜಕೀಯ ಪ್ರತಿನಿಧಿಗಳಾದ ನಾಗರಾಜ ಹದ್ಲಿ, ಮಹಾಂತೇಶ ಮಾವಿನಮರದ, ಪ್ರಭು ಹಳ್ಳೂರ, ಉಮೇಶ, ಹಂಚನಾಳ, ಎಂ.ಎಂ.ಮುತ್ತಪ್ಪನವರ, ಶ್ರೀಧರ ನಾಗರಬೆಟ್ಟ, ಮನಮಂತ ಮಾದರ ಇತರರು ಉಪಸ್ಥಿತರಿದ್ದರು.
"
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಅಂಗವಾಗಿ ವಿವಿಧ ಇಲಾಖೆಗಳು, ಸ್ಥಳೀಯ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಸ್ವ-ಸಹಾಯ ಸಂಘಗಳ ಸಹಯೋಗದಲ್ಲಿ ಮೂರನೇ ವಾರದಲ್ಲಿ ಜಿಲ್ಲಾದ್ಯಂತ ಸ್ವೀಪ್‌ದಡಿ ಜಾಗೃತಿ ಮೂಡಿಸುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.