ಕಠಿಣ ಪರಿಶ್ರಮದಿಂದ ಸಾಧನೆ ಸಾಧ್ಯ

ಬಾಗಲಕೋಟೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಕಾಲೇಜು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಸಂಗಪ್ಪ ಎಂ. ಹಾಗೂ ಜಿ.ಪಂ. ಸಿಇಒ ಶಶಿಧರ ಕುರೇರ ಸನ್ಮಾನಿಸಿದರು. ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಂಕಜ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ಎಂ., ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಧಿಕಾರಿ ಸಂಗಪ್ಪ ಎಂ. ಅಭಿಮತ
  • ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ
ಬಾಗಲಕೋಟೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಕಾಲೇಜು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಸಂಗಪ್ಪ ಎಂ. ಹಾಗೂ ಜಿ.ಪಂ. ಸಿಇಒ ಶಶಿಧರ ಕುರೇರ ಸನ್ಮಾನಿಸಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿಜ್ಞಾನ ವಿಭಾಗದಲ್ಲಿ ಬಾಗಲಕೋಟೆ ತಾಲೂಕಿನಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ (ಬಾಲಕರ ವಿಭಾಗದಲ್ಲಿ) ಭೀಮಪ್ಪ ಬಿರ್ಲಿ ಶೇ. 98.33, ಹರೀಶ ಬಾಲರಡ್ಡಿ ಶೇ. 97.17, ಸಂಗಮೇಶ ಪಟ್ಟಣದ ಶೇ. 96.67 ಅಂಕ ಪಡೆದುಕೊಂಡಿದ್ದಾರೆ.
ಕಲಾ ವಿಭಾಗದಲ್ಲಿ ದೇವಮ್ಮ ಯಡಹಳ್ಳಿ ಶೇ. 99, ಶ್ವೇತಾ ಹೊರಕೇರಿ ಶೇ. 96.50, ವಾಣಿಜ್ಯ ವಿಭಾಗದಲ್ಲಿ ಸಂಗೀತಾ ಗಾಡದಾರ ಶೇ. 98.83, ಲಕ್ಷ್ಮೀ ಭೂಮಾರ ಶೇ. 97.83, ತೇಜಶ್ವಿನಿ ದೊರೆಗೊಳ ಶೇ. 96.17 ಅಂಕ ಪಡೆದುಕೊಂಡಿದ್ದು, ಈ ಎಲ್ಲ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಜಿಲ್ಲಾಧಿಕಾರಿ ಸಂಗಪ್ಪ ಎಂ. ಮಾತನಾಡಿ, ವಿದ್ಯಾರ್ಥಿಗಳು ಸಾಧಿಸಿರುವ ಉತ್ತಮ ಫಲಿತಾಂಶ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ. ಕಠಿಣ ಪರಿಶ್ರಮ ಹಾಗೂ ಶಿಸ್ತುಬದ್ಧ ಅಧ್ಯಯನದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ತಿಳಿಸಿದರು.
ಜಿ.ಪಂ. ಸಿಇಒ ಶಶಿಧರ ಕುರೇರ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಸರ್ಕಾರ ನೀಡುತ್ತಿರುವ ಸೌಲಭ್ಯಗಳ ಸದುಪಯೋಗ ಪಡಿಸಿಕೊಂಡು ಇನ್ನಷ್ಟು ಉತ್ತಮ ಸಾಧನೆ ಮಾಡುವಂತೆ ಪ್ರೋತ್ಸಾಹಿಸಿದರು.
ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಂಕಜ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ಎಂ., ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net