ಇನ್ನು ಮುಂದೆ ಬಾರ್ ಮತ್ತು ಲಾರ್ಡ್ಜ್‌ಗಳ ಆವರಣದಲ್ಲಿ ಸಿಸಿ ಕ್ಯಾಮರಾ ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ನಿಮ್ಮ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಅಥವಾ ಗಲಾಟೆಗಳು ನಡೆದರೆ, ಅದಕ್ಕೆ ಮಾಲೀಕರೆ ನೇರ ಜವಾಬ್ದಾರರಾಗುತ್ತಾರೆ ಎಂದು ಎಚ್ಚರಿಸಿದರು. ಲಾರ್ಡ್ಜ್‌ಗಳಲ್ಲಿ ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳು ಅಥವಾ ವೇಶ್ಯಾವಾಟಿಕೆ ನಡೆಯದಂತೆ ನಿಗಾ ವಹಿಸಬೇಕು. ಹೋಟೆಲ್‌ಗಳಲ್ಲಿ ಅಪ್ರಾಪ್ತರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಖಡಕ್ ಸೂಚನೆ ನೀಡಿದರು.