ಆ.೫ ರಂದು ವ್ಯಸನ ಮುಕ್ತ ದಿನಾಚರಣೆ

ಬಾಗಲಕೋಟೆ ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಮಂಗಳವಾರ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಆಚರಣೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಽಕಾರಿ ಸಂಗಪ್ಪ ಎಂ. ಮಾತನಾಡಿದರು. ಅಪರ ಜಿಲ್ಲಾಽಕಾರಿ ಅಶೋಕ ತೇಲಿ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಅಜೀತ್ ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಸಹಾಯಕ ಯೋಜನಾಽಕಾರಿ ಭೀಮಪ್ಪ ತಳವಾರ, ಆಯೋಗ್ಯ ಇಲಾಖೆಯ ಶಿವನಗೌಡ ಪಾಟೀಲ ಇದ್ದರು. .
ಬಾಗಲಕೋಟೆ ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಮಂಗಳವಾರ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಆಚರಣೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಽಕಾರಿ ಸಂಗಪ್ಪ ಎಂ. ಮಾತನಾಡಿದರು. ಅಪರ ಜಿಲ್ಲಾಽಕಾರಿ ಅಶೋಕ ತೇಲಿ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಅಜೀತ್ ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಸಹಾಯಕ ಯೋಜನಾಽಕಾರಿ ಭೀಮಪ್ಪ ತಳವಾರ, ಆಯೋಗ್ಯ ಇಲಾಖೆಯ ಶಿವನಗೌಡ ಪಾಟೀಲ ಇದ್ದರು. .
Published on
ಬಾಗಲಕೋಟೆ: ಡಾ.ಮಹಾಂತ ಶ್ರೀಗಳ ಜನ್ಮದಿನಾಚರಣೆ ಅಂಗವಾಗಿ ಆ.೫ ರಂದು ವ್ಯಸನ ಮುಕ್ತ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಽಕಾರಿ ಸಂಗಪ್ಪ ಎಂ. ಹೇಳಿದರು.
ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಮಂಗಳವಾರ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಆಚರಣೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲಾ ಮಟ್ಟದ ಕಾರ್ಯಕ್ರಮ ಆ.೫ ರಂದು ಏರ್ಪಡಿಸಲಾಗಿದೆ. ತಾಲೂಕಾ ಮಟ್ಟದಲ್ಲಿ ತಹಸೀಲ್ದಾರ ನೇತೃತ್ವದಲ್ಲಿ ಆ.೧ ರಂದು ಕಾರ್ಯಕ್ರಮ ಆಯೋಜನೆ ಮಾಡಲು ತಿಳಿಸಿದರು.
ಜಿಲ್ಲಾ ಮಟ್ಟದ ಕಾರ್ಯಕ್ರಮ ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದು, ಶಿಷ್ಠಾಚಾರದ ಪ್ರಕಾರ ಆಮಂತ್ರಣ ಪತ್ರಿಕೆ ಮುದ್ರಣ, ನಗರದ ಪ್ರಮುಖ ಸ್ಥಳಗಳಲ್ಲಿ ಬ್ಯಾನರ್ ಅಳವಡಿಕೆ, ಕಾರ್ಯಕ್ರಮದ ರೂಪು ರೇಷೆಗಳ ಬಗ್ಗೆ ಚರ್ಚಿಸಲಾಯಿತು, ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಕುರಿತು ಉಪನ್ಯಾಸ ನೀಡಲು ಉತ್ತಮ ಉಪನ್ಯಾಸಕರನ್ನು ಆಹ್ವಾನಿಸುವಂತೆ ಅಽಕಾರಿಗಳಿಗೆ ತಿಳಿಸಿದರು.
ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಯುವಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ವ್ಯಸನದಿಂದ ದೂರವಿರುವಂತೆ ಪ್ರೇರೇಪಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಆದ್ದರಿಂದ ಕಾಲೇಜು ಹಂತದಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಕಾರ್ಯಕ್ರಮವನ್ನು ಯಶಸ್ವಿಗೆ ಅಗತ್ಯ ಎಲ್ಲ ಸಿದ್ದತೆಗಳನ್ನು ಕೈಗೊಳ್ಳುವಂತೆ ವಾರ್ತಾ ಇಲಾಖೆಯ ಅಽಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಽಕಾರಿ ಅಶೋಕ ತೇಲಿ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಅಜೀತ್ ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಸಹಾಯಕ ಯೋಜನಾಽಕಾರಿ ಭೀಮಪ್ಪ ತಳವಾರ, ಆಯೋಗ್ಯ ಇಲಾಖೆಯ ಶಿವನಗೌಡ ಪಾಟೀಲ, ಇಳಕಲ್ಲ ಮಹಾಂತ ಶಿವಯೋಗಿಗಳ ಮಠದ ಪ್ರತಿನಿಽಯಾಗಿ ಜಿ.ಎಸ್.ಗೌಡರ ಸೇರಿದಂತೆ ಇತರೆ ಇಲಾಖೆಯ ಅಽಕಾರಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net