ಹನ್ನೆರಡನೇ ಶತಮಾನದಲ್ಲಿ ಸಮಾಜವು ಎದುರಿಸುತ್ತಿದ್ದ ಮೌಢ್ಯತೆಗಳನ್ನು ಧಿಕ್ಕರಿಸಿ, ತಮ್ಮ ವಚನಗಳ ಮೂಲಕ ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಮಹಾನ್ ಶರಣರಾಗಿದ್ದರು ಎಂದರು.
ಗುಳೇದಗುಡ್ಡ : ಹನ್ನೆರಡನೇ ಶತಮಾನದಲ್ಲಿ ಹಡಪದ ಅಪ್ಪಣ್ಣನವರು ಕಾಯಕ, ದಾಸೋಹ, ಸಮಾನತೆ ಮತ್ತು ಮಾನವೀಯ ಮೌಲ್ಯಗಳನ್ನು ತಮ್ಮ ವಚನಗಳ ಮೂಲಕ ಪ್ರತಿಪಾದಿಸುವುದರ ಜೊತೆಗೆ ಬಸವಣ್ಣನವರ ಕ್ರಾಂತಿಯ ಪ್ರಭಾವಕ್ಕೆ ಒಳಗಾಗಿ ಬಸವಣ್ಣನವರ ಅನುಭವ ಮಂಟಪವನ್ನು ಸೇರಿಕೊಂಡು ಸಾಮಾಜಿಕ ಕ್ರಾಂತಿಗೆ ಧುಮುಕಿದರು ಎಂದು ಪುರಸಭೆ ವ್ಯವಸ್ಥಾಪಕ ಎ.ಎಚ್. ಮುದ್ದೇಬಿಹಾಳ ಹೇಳಿದರು.
ಪುರಸಭೆ ಕಾರ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಅಂಗವಾಗಿ ಹಡಪದ ಅಪ್ಪಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ, ಪೂಜೆ ಸಲ್ಲಿಸಿ ಮಾತನಾಡಿದ ಅವರು, ಹನ್ನೆರಡನೇ ಶತಮಾನದಲ್ಲಿ ಸಮಾಜವು ಎದುರಿಸುತ್ತಿದ್ದ ಮೌಢ್ಯತೆಗಳನ್ನು ಧಿಕ್ಕರಿಸಿ, ತಮ್ಮ ವಚನಗಳ ಮೂಲಕ ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಮಹಾನ್ ಶರಣರಾಗಿದ್ದರು ಎಂದರು.