ಮಾನವ ಕಳ್ಳ ಸಾಗಾಣಿಕೆ ತಡೆಗೆ ಜಾಗೃತಿ ಅಗತ್ಯ

ಬಾಗಲಕೋಟೆ ಜಿಲ್ಲಾ ಆರೋಗ್ಯ ಇಲಾಖೆ ಸಭಾಭವನದಲ್ಲಿ ಶುಕ್ರವಾರ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆಯಲ್ಲಿ ಜಾಗೃತಿ ಪೋಸ್ಟರ್‌ಗಳನ್ನು ಜಿಲ್ಲಾಽಕಾರಿ ಸಂಗಪ್ಪ ಬಿಡುಗಡೆ ಮಾಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ, ಜಿಪಂ ಉಪ ಕಾರ್ಯದರ್ಶಿ ಎನ್.ವೈ.ಬಸರಿಗಿಡದ, ಡಿಎಚ್‌ಒ ಡಾ.ರಾಜಕುಮಾರ ಯರಗಲ್ಲ ಇತರರು ಇದ್ದರು.
ಬಾಗಲಕೋಟೆ ಜಿಲ್ಲಾ ಆರೋಗ್ಯ ಇಲಾಖೆ ಸಭಾಭವನದಲ್ಲಿ ಶುಕ್ರವಾರ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆಯಲ್ಲಿ ಜಾಗೃತಿ ಪೋಸ್ಟರ್‌ಗಳನ್ನು ಜಿಲ್ಲಾಽಕಾರಿ ಸಂಗಪ್ಪ ಬಿಡುಗಡೆ ಮಾಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ, ಜಿಪಂ ಉಪ ಕಾರ್ಯದರ್ಶಿ ಎನ್.ವೈ.ಬಸರಿಗಿಡದ, ಡಿಎಚ್‌ಒ ಡಾ.ರಾಜಕುಮಾರ ಯರಗಲ್ಲ ಇತರರು ಇದ್ದರು.
Published on

ಮಾನವ ಕಳ್ಳ ಸಾಗಾಣಿಕೆಯಂತಹ ಸಾಮಾಜಿಕ ಪಿಡುಗನ್ನು ತಡೆಗಟ್ಟಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾಽಕಾರಿ ಸಂಗಪ್ಪ ಹೇಳಿದರು.

ಜಿಲ್ಲಾ ಆರೋಗ್ಯ ಇಲಾಖೆಯ ಸಭಾಭವನದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾನೂನು ಸೇವಾ ಪ್ರಾಽಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಾನವ ಕಳ್ಳ ಸಾಗಣೆಯಂತಹ ಅನಿಷ್ಟ ಪದ್ದತಿಯಿಂದ ಮಕ್ಕಳ ಜೀವನ ಬಲಿಯಾಗದಂತೆ ಸಮಾಜ ಎಚ್ಚರಿಕೆ ವಹಿಸಬೇಕಿದೆ. ಕಳ್ಳ ಸಾಗಾಣಿಕೆ ತಡೆಯಲು ಕೇವಲ ಇಲಾಖೆಗಳಿಂದ ಸಾಧ್ಯವಿಲ್ಲ. ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಿದಾಗ ಮಾತ್ರ ಸಾಧ್ಯವೆಂದರು.
ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಸಿದ್ದಾರ್ಥ ಗೋಯಲ್ ಮಾತನಾಡಿ, ಮಕ್ಕಳು ಹಾಗೂ ಮಹಿಳೆಯರು ಕಳ್ಳಸಾಗಣೆಗೆ ಒಳಗಾಗದಂತೆ ಕುಟುಂಬಗಳು ಹಾಗೂ ಸಮುದಾಯಗಳು ಹೆಚ್ಚಿನ ಜಾಗೃತಿ ವಹಿಸಬೇಕು. ಅನುಮಾನಾಸ್ಪದ ಚಟುವಟಿಕೆಗಳು ಕಂಡುಬAದಲ್ಲಿ ತಕ್ಷಣ ಸಂಬAಽಸಿದ ಇಲಾಖೆಗಳ ಗಮನಕ್ಕೆ ತಂದು, ಸಂತ್ರಸ್ಥರಿಗೆ ರಕ್ಷಣೆ ಮತ್ತು ಅಗತ್ಯ ನೆರವು ದೊರಕುವಂತೆ ಮಾಡಬೇಕು. ಮಾನವ ಕಳ್ಳಸಾಗಾಣಿಕೆ ವಿವಿಧ ಕಾರಣಗಳಿಂದ ನಡೆಯುತ್ತಿದ್ದು, ಕೆಲವೊಮ್ಮೆ ಅಂಗಾAಗಗಳ ಮಾರಾಟದಂತಹ ಅಪರಾಧ ಚಟುವಟಿಕೆಗಳ ಹಿನ್ನಲೆಯಲ್ಲಿಯೂ ಸಾಗಾಟ ನಡೆಯುತ್ತಿರುತ್ತವೆ. ಮಕ್ಕಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಅವರು ಪ್ರತಿಜ್ಞಾವಿಽ ಬೋಽಸಿ, ಮಾನವರನ್ನು ಹೇಗೆ ದುಡಿಸಿಕೊಳ್ಳಬೇಕು ಹಾಗೂ ಅವರ ಶ್ರಮದಿಂದ ಹೇಗೆ ಲಾಭ ಪಡೆಯಬೇಕು ಎಂಬ ಮನೋಭಾವ ಕೆಲವರಲ್ಲಿ ಕಂಡುಬರುತ್ತಿದ್ದು, ಇದು ಮಾನವ ಕಳ್ಳಸಾಗಣೆ ಮತ್ತು ಶೋಷಣೆಗೆ ಕಾರಣವಾಗುತ್ತಿದೆ. ಇಟ್ಟಿಗೆ ಬಟ್ಟಿಯಲ್ಲಿ ಜೀತ ಪದ್ದತಿ ನಡೆಯುತ್ತಿರುವ ಪ್ರಕರಣಗಳು ಕಂಡಯಬರುತ್ತಿವೆ. ದುರ್ಬಲ ವರ್ಗದ ಜನರನ್ನು ವಿವಿಧ ರೀತಿಯಲ್ಲಿ ದುಡಿಸಿಕೊಂಡು ಶೋಷಣೆ ಮಾಡುವುದನ್ನು ತಡೆಗಟ್ಟಲು ನಿರಂತರ ಜಾಗೃತಿ ಮತ್ತು ಕಾನೂನು ಕ್ರಮ ಅಗತ್ಯವಾಗಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಽಕಾರಿ ಡಾ.ರಾಜಕುಮಾರ ಯರಗಲ್ಲ ಮಾತನಾಡಿ, ಮಾನವ ಕಳ್ಳ ಸಾಗಣೆ ತಡೆ ದಿನಾಚರಣೆ ಸಂದರ್ಭದಲ್ಲಿ ಸ್ವೀಕರಿಸುವ ಪ್ರತಿಜ್ಞೆ ಕೇವಲ ಕಾರ್ಯಕ್ರಮಕ್ಕೆ ಅಥವಾ ಮಾತಿಗೆ ಸೀಮಿತವಾಗಬಾರದು. ಅದನ್ನು ಜೀವನದಲ್ಲಿ ಅಳವಡಿಸಿಕೊಂಡು ಕಾರ್ಯರೂಪಕ್ಕೆ ತರುವ ಕೆಲಸವಾಗಬೇಕು ಎಂದು ತಿಳಿಸಿದರು.
ಈ ವೇಳೆ ಮಾನವ ಸಾಗಾಣಿಕೆ ತಡೆ ಕುರಿತ ಜಾಗೃತಿ ಪೋಸ್ಟರಗಳನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎನ್.ವೈ. ಬಸರಿಗಿಡದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಪ್ರಭಾಕರ, ನಿರೂಪಣಾಽಕಾರಿ ಮಂಜುನಾಥ ಪರಸನ್ನವರ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net