ಸಂಭ್ರಮದಿಂದ ಬಕ್ರೀದ್ ಹಬ್ಬ ಆಚರಣೆ

* ಐಎಲ್‌ಕೆ-೨೮-೧
* ಐಎಲ್‌ಕೆ-೨೮-೧
Published on
ಇಳಕಲ್ಲ : ನಗರದ ಮುಸ್ಲಿಂ ಬಾಂಧವರು ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಗುರುವಾರ ಭಕ್ತಿಭಾವದಿಂದ ಆಚರಿಸಿದರು.
ನಗರದ ಈದ್ಗಾ ಮೈದಾನದಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಅಲಿಂಗಿಸಿ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಮುರ್ತುಜಾ ಖಾದ್ರಿ ದರ್ಗಾ ಆವರಣ ಹಾಗೂ ಜೋಡು ಮಸೀದಿಯಲ್ಲಿ ನಡೆದ ಪ್ರಾರ್ಥನಾ ಸಭೆಗಳಲ್ಲಿ ಸಾವಿರಾರು ಮಂದಿ ಭಾಗವಹಿಸಿದರು.
ತಾಲೂಕಿನ ಗ್ರಾಮೀಣ ಭಾಗಗಳಲ್ಲಿಯೂ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲಾಯಿತು. ಹಬ್ಬದ ಅಂಗವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿತ್ತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net