ಕಾಯ್ದೆ ಮೂಲಕ ಗೋ ಹತ್ಯೆ ನಿಷೇಧ ಮಾಡಿ

ಬಾಗಲಕೋಟೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಹಿಂದೂ ಜಾಗರಣ ವೇದಿಕೆ ಮುಖಂಡ ವೆಂಕಣ್ಣ ಕಳ್ಳಿಗುಡ್ಡ ಮಾತನಾಡಿದರು. ಮುಖಂಡರಾದ ಕುಮಾರಸ್ವಾಮಿ ಹಿರೇಮಠ, ಮಲ್ಲು ಕೋಟಿ, ಅರುಣ ಕಟ್ಟಿಮನಿ, ನಾಗರಾಜ ಅಂಬಿಗೇರ, ಕೃಷ್ಣಾ ಹಸರೆಡ್ಡಿ ಇತರರಿದ್ದರು.
ಬಾಗಲಕೋಟೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಹಿಂದೂ ಜಾಗರಣ ವೇದಿಕೆ ಮುಖಂಡ ವೆಂಕಣ್ಣ ಕಳ್ಳಿಗುಡ್ಡ ಮಾತನಾಡಿದರು. ಮುಖಂಡರಾದ ಕುಮಾರಸ್ವಾಮಿ ಹಿರೇಮಠ, ಮಲ್ಲು ಕೋಟಿ, ಅರುಣ ಕಟ್ಟಿಮನಿ, ನಾಗರಾಜ ಅಂಬಿಗೇರ, ಕೃಷ್ಣಾ ಹಸರೆಡ್ಡಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಬಕ್ರೀದ್ ಹಬ್ಬ ಹಿನ್ನೆಲೆ
  • ಹಿಂದೂ ಜಾಗರಣ ವೇದಿಕೆ ಆಗ್ರಹ
ಬಾಗಲಕೋಟೆ: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ಅನಧಿಕೃತ ಕಸಾಯಿ ಖಾನೆಗಳಲ್ಲಿ ಕಾನೂನು ಬಾಹಿರವಾಗಿ ಗೋಹತ್ಯೆ ನಡೆಯುತ್ತಿದ್ದು, ಇದನ್ನು ತಕ್ಷಣವೇ ತಡೆಗಟ್ಟಬೇಕು ಎಂದು ಹಿಂದೂ ಜಾಗರಣ ವೇದಿಕೆ ಮುಖಂಡ ವೆಂಕಣ್ಣ ಕಳ್ಳಿಗುಡ್ಡ ಹೇಳಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಅನಽಕೃತವಾಗಿ ಗೋವುಗಳನ್ನು ಕತ್ತರಿಸಿ, ಅವುಗಳ ತ್ಯಾಜ್ಯವನ್ನು ನದಿಗೆ ಎಸೆಯುವ ಮೂಲಕ ಪರಿಸರ ಮಾಲಿನ್ಯ ಮಾಡಲಾಗುತ್ತಿದೆ. ಈ ಕುರಿತು ಈಗಾಗಲೇ ಪೊಲೀಸ್ ಇಲಾಖೆಗೆ ಸೂಕ್ತ ಸಾಕ್ಷ್ಯಾಧಾರಗಳೊಂದಿಗೆ ಹಲವು ಬಾರಿ ಮಾಹಿತಿ ನೀಡಲಾಗಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.
ಮೇ 28ರಂದು ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋಹತ್ಯೆ ತಡೆಯಲು ಪೊಲೀಸ್ ಇಲಾಖೆ ಈಗಿನಿಂದಲೇ ಮುನ್ನೆಚ್ಚರಿಕೆ ವಹಿಸಬೇಕು. ಒಂದು ವೇಳೆ ಇಲಾಖೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಹಿಂದೂ ಸಂಘಟನೆಗಳೇ ಕಾನೂನುಬಾಹಿರ ಗೋ ಸಾಗಾಟ ಮತ್ತು ಹತ್ಯೆಯನ್ನು ತಡೆಯಲು ಮುಂದಾಗಬೇಕಾಗುತ್ತದೆ. ಈ ವೇಳೆ ಏನಾದರೂ ಅಹಿತಕರ ಘಟನೆಗಳು ಸಂಭವಿಸಿದರೆ ಅದಕ್ಕೆ ಜಿಲ್ಲಾಡಳಿತ ಮತ್ತು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೇ ನೇರ ಹೊಣೆ ಎಂದು ಎಚ್ಚರಿಕೆ ನೀಡಿದರು.
ಜಿಲ್ಲೆಯಲ್ಲಿ ಗೋ ಹತ್ಯೆ ಕಾಯ್ದೆ-2023 ಕಟ್ಟುನಿಟ್ಟು ಪಾಲನೆಯಾಗುತ್ತಿಲ್ಲ. ಆಯಾ ಸಂಬಂಧಪಟ್ಟ ಇಲಾಖೆಗಳು ಕಾರ್ಯ ನಿರ್ವಹಿಸುವಲ್ಲಿ ವಿಫಲವಾಗಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ದನದ ಸಂತೆಗಳಲ್ಲಿ ಗೋ ಮಾರಾಟ ನಡೆಯುತ್ತದೆ. ದಲ್ಲಾಳಿಗಳ ಹಾವಳಿ ಹೆಚ್ಚಾಗಿ ಆಗುತ್ತಿದೆ. ಈ ಕಾರಣಕ್ಕೆ ಜಿಲ್ಲಾದ್ಯಂತ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಹಾಗೂ ಪ್ರಾಣಿ ಸಂರಕ್ಷಣಾ ಇಲಾಖೆ ಕಟ್ಟು ನಿಟ್ಟಿನ ಕ್ರಮ ವಹಿಸಬೇಕೆಂದು ಆಗ್ರಹಿಸಿದರು.
ಮುಖಂಡರಾದ ಕುಮಾರಸ್ವಾಮಿ ಹಿರೇಮಠ, ಮಲ್ಲು ಕೋಟಿ, ಅರುಣ ಕಟ್ಟಿಮನಿ, ನಾಗರಾಜ ಅಂಬಿಗೇರ, ಕೃಷ್ಣಾ ಹಸರೆಡ್ಡಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net