ಜಾತ್ರಾಮಹೋತ್ಸವ ಅವಧಿಯಲ್ಲಿ ವಿವಿಧ ಚಿಂತಕರು, ವಿದ್ವಾಂಸರು ಹಾಗೂ ನಾಡಿನ ಮಠಧೀಶರಿಂದ ವಿಶೇಷ ಉಪನ್ಯಾಸಗಳು ನಡೆಯಲಿವೆ. ಏ. 17ರಂದು ನಡೆಯುವ ಓಲೆಮಠದ ನೂತನ ಕಟ್ಟಡದ ನೀಲನಕ್ಷೆ ಬಿಡುಗಡೆ ಕಾರ್ಯಕ್ರಮದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ, ಮಾಜಿ ಸಚಿವ ಮುರುಗೇಶ ನಿರಾಣಿ, ಶಾಸಕ ನಾಡೋಜ ಜಗದೀಶ ಗುಡಗುಂಟಿ, ತೇರದಾಳ ಶಾಸಕ ಸಿದ್ದು ಸವದಿ, ಮಾಜಿ ಶಾಸಕ ಆನಂದ ನ್ಯಾಮಗೌಡ ಹಾಗೂ ಏ. 19ರಂದು ನಡೆಯುವ ಕಾರ್ಯಕ್ರಮದಲ್ಲಿ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಸೇರಿ ಹಲವಾರು ಗಣ್ಯರು ಪಾಲ್ಗೊಳ್ಳುವರು.