ಮಾಹಿತಿ ಸಂಗ್ರಹಣೆಯಲ್ಲಿ ಹೆಚ್ಚಿನ ನಿಗಾ ವಹಿಸಿ

ಬಾಗಲಕೋಟೆ ಜಿಪಂ ನೂತನ ಸಭಾಭವನದಲ್ಲಿ ಸೋಮವಾರ ಆಯೋಜಿಸಿದ್ದ ಜಾತಿಗಣತಿ-2027ರ ಮೂರು ದಿನಗಳ ತರಬೇತಿ ಕಾರ್ಯಾಗಾರದಲ್ಲಿ ಹಿರಿಯ ಅಽಕಾರಿಗಳು ಮಾರ್ಗದರ್ಶನ ನೀಡಿದರು. ಡಿಸಿ ಸಂಗಪ್ಪ, ಜಿಪಂ ಸಿಇಒ ಶಶಿಧರ ಕುರೇರ, ಜನಗಣತಿ ನಿರ್ದೇಶನಾಲಯದ ಜಂಟಿ ನಿರ್ದೇಶಕ ಶಕ್ತಿಕುಮಾರ ಮತ್ತಿತರರು ಇದ್ದರು.
ಬಾಗಲಕೋಟೆ ಜಿಪಂ ನೂತನ ಸಭಾಭವನದಲ್ಲಿ ಸೋಮವಾರ ಆಯೋಜಿಸಿದ್ದ ಜಾತಿಗಣತಿ-2027ರ ಮೂರು ದಿನಗಳ ತರಬೇತಿ ಕಾರ್ಯಾಗಾರದಲ್ಲಿ ಹಿರಿಯ ಅಽಕಾರಿಗಳು ಮಾರ್ಗದರ್ಶನ ನೀಡಿದರು. ಡಿಸಿ ಸಂಗಪ್ಪ, ಜಿಪಂ ಸಿಇಒ ಶಶಿಧರ ಕುರೇರ, ಜನಗಣತಿ ನಿರ್ದೇಶನಾಲಯದ ಜಂಟಿ ನಿರ್ದೇಶಕ ಶಕ್ತಿಕುಮಾರ ಮತ್ತಿತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಧಿಕಾರಿ ಸಂಗಪ್ಪ ಸಲಹೆ
  • ಜನಗಣತಿ-2027ರ ತರಬೇತಿ ಕಾರ್ಯಾಗಾರಕ್ಕೆ ಚಾಲನೆ
ಬಾಗಲಕೋಟೆ: ಜಾತಿಗಣತಿ ಮಾಹಿತಿ ಸಂಗ್ರಹಣೆಯಲ್ಲಿ ಯಾವುದೇ ತಪ್ಪು ನಡೆಯದಂತೆ ಹೆಚ್ಚಿನ ಜಾಗೃತಿ ವಹಿಸುವಂತೆ ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದರು.
ನಗದರ ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಸೋಮವಾರ ಹಮ್ಮಿಕೊಂಡಿರುವ ಜಿಲ್ಲೆಯಲ್ಲಿ ಜನಗಣತಿ-2027ರ ಕುರಿತು ಮೂರು ದಿನಗಳ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಾತಿಗಣತಿ ಕಾರ್ಯವನ್ನು ಯಶಸ್ವಿಯಾಗಿ ಹಾಗೂ ನಿಖರವಾಗಿ ನಡೆಸುವ ಉದ್ದೇಶದಿಂದ ಮೂರು ದಿನಗಳ ತರಬೇತಿಯನ್ನು ಏರ್ಪಡಿಸಲಾಗಿದೆ. ಜಾತಿಗಣತಿಯೂ ದೇಶದ ಅಭಿವೃದ್ಧಿ ಯೋಜನೆಗಳಿಗೆ ಪ್ರಮುಖ ಆಧಾರ ಆಗಿರುವದರಿಂದ ಮಾಹಿತ ಸಂಗ್ರಹಿಸಲಾಗುತ್ತಿದೆ. ಹೀಗಾಗಿ ಯಾವುದೇ ತಪ್ಪು ನಡೆಯದಂತೆ ಹೆಚ್ಚಿನ ನಿಗಾ ವಹಿಸಬೇಕು. ಸಂಪೂರ್ಣವಾಗಿ ತರಬೇತಿ ಪಡೆದಲ್ಲಿ ಗಣತಿ ಕಾರ್ಯವು ಯಶಸ್ವಿಯಾದಂತೆ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ, ಸರ್ಕಾರಿ ಕಾರ್ಯಕ್ರಮಕ್ಕೆ ಸೇರಿದ ಮೇಲೆ ಹತ್ತು ಹಲವಾರು ಜವಾಬ್ದಾರಿ ನೀಡಲಾಗುತ್ತದೆ. ಚುನಾವಣೆ ಕಾರ್ಯ, ಮಹತ್ವಕಾಂಕ್ಷಿ ಯೋಜನೆ ಅನುಷ್ಠಾನಕ್ಕೆ ಕಡಿಬದ್ಧರಾಗಿ ಕೆಲಸ ಮಾಡಬೇಕಾಗುತ್ತದೆ. ಅಭಿವೃದ್ಧಿಯ ಸೂಚ್ಯಂಕ ತೋರಿಸಲು ಅಂಕಿ ಅಂಶಗಳು ಅಗತ್ಯವಾಗಿ ಬೇಕಾಗುತ್ತದೆ. ಯೋಜನೆಗಳನ್ನು ಗುರುತಿಸಲು ಜನಗಣತಿ ಬಹಳ ಮಹತ್ವದ್ದಾಗಿದೆ. ಸರಿಯಾದ ಮಾಹಿತಿ ಸಂಗ್ರಹಿಸದಿದ್ದರೆ. ಅಭಿವೃದ್ಧಿಯ ಮೇಲೆ ಪರಿಣಾಮ ಬೀರುತ್ತದೆ ಎಂದು ತಿಳಿಸಿದರು.
ಜನರ ಅಭಿವೃದ್ಧಿಗಾಗಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ಆರೋಗ್ಯ ದೃಷ್ಠಿಯಿಂದ ಸಮೀಕ್ಷೆಯ ದತ್ತಾಂಶಗಳು ಬೇಕಾಗುತ್ತದೆ. ಜನಗಣತಿ ಪ್ರಕ್ರಿಯೆ ಮನೆಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಬೇಕಾಗುತ್ತದೆ. ನೀವು ಸಂಗ್ರಹಿಸಿದ ಮಾಹಿತಿ ಮುಂದಿನ 5 ವರ್ಷ ಇಲ್ಲವೇ 10 ವರ್ಷಗಳವರೆಗೆ ಯೋಜನೆಗಳನ್ನು ರೂಪಿಸಲು ಸಹಕಾರಿಯಾಗಲಿದೆ. ಆದ್ದರಿಂದ ಜನಗಣತಿ-2027 ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಸಂಪೂರ್ಣವಾದ ತರಬೇತಿ ಪಡೆದುಕೊಳ್ಳಲು ತಿಳಿಸಿದರು.
ಜನಗಣತಿ ನಿರ್ದೇಶನಾಲಯದ ಜಂಟಿ ನಿರ್ದೇಶಕ ಶಕ್ತಿಕುಮಾರ ಮಾತನಾಡಿ, ಜನಗಣತಿ-2027ರ ಕಾರ್ಯವನ್ನು ಆಧುನಿಕ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ಸಮೀಕ್ಷೆ ಕಾರ್ಯ ನಡೆಸಲಾಗುತ್ತಿದೆ. ತರಬೇತಿ ಕಾರ್ಯಾಗಾರದಲ್ಲಿ ಜನಗಣತಿ ಪ್ರಕ್ರಿಯೆ, ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ವಿಧಾನ, ಡಿಜಿಟಲ್ ಸಾಧನಗಳ ಬಳಕೆ ಹಾಗೂ ಮಾಹಿತಿ ದಾಖಲಿಸುವ ಕ್ರಮಗಳ ಕುರಿತು ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು.
ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ಜನಗಣತಿ ನಿರ್ದೇಶನಾಲಯದ ಸಹಾಯಕ ನಿರ್ದೇಶಕ ಶಮಕುಮಾರ ಎಸ್.ಬಿ, ತರಬೇತಿಯ ಜಿಲ್ಲಾ ನೋಡಲ್ ಅಽಕಾರಿ ಶುಶೀಲಕುಮಾರ ಶರ್ಮಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ಎಂ ಇತರರು ಉಪಸ್ಥಿತರಿದ್ದರು. ತರಬೇತಿ ಕಾರ್ಯಾಗಾರದಲ್ಲಿ ತಹಸೀಲ್ದಾರ್, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ವಿಷಯ ನಿರ್ವಾಹಕರು ಸೇರಿ 130 ಜನ ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net