ಬಾಗಲಕೋಟೆ: ಬಾಗಲಕೋಟೆ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಬುಧವಾರ ಬೆಳ್ಳಂ ಬೆಳಗ್ಗೆಯಿಂದಲೇ ನಗರದ ವಿವಿಧ ವಾರ್ಡ್ಗಳಲ್ಲಿ ಮನೆ ಮನೆಗೆ ತೆರಳಿ ಮತಬೇಟಿ ನಡೆಸಿದರು.
ನಗರದ ವಾರ್ಡ್ ನಂಬರ್ ೦೩, ೦೮, ೧೦, ೧೪ ರಲ್ಲಿ ತಮ್ಮ ಕಾರ್ಯಕರ್ತರ ಪಡೆಯೊಂದಿಗೆ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿ, ಮತಯಾಚಿಸಿದರು. ನವನಗರದ ಸೆಕ್ಟರ್ ನಂಬರ್ ೬೩ಎ ನಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಡಿ.ಲಕ್ಷಿ÷್ಮÃನಾರಾಯಣ, ರಾಜೇಶ್ವರಿ ಚರಂತಿಮಠ ಅವರು ಬಿರುಸಿನ ಪ್ರಚಾರ ನಡೆಸಿದರು.
ಬೆಳಗ್ಗೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ನವನಗರದ ಉತ್ತರಾಽ ಮಠಕ್ಕೆ ಭೇಟಿ ನೀಡಿ ಪೂಜ್ಯ ಸತ್ಯಾತ್ಮತೀರ್ಥ ಶ್ರೀಪಾದಂಗಳವರ ಆಶೀರ್ವಾದ ಪಡೆದುಕೊಂಡರು. ಹಾಗೆಯೇ ನಗರದ ಕೌಲಪೇಟೆ ಪ್ರದೇಶದಲ್ಲಿ ಇರುವ ಆನಂದೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮತಯಾಚನೆ ಆರಂಭಿಸಿದರು. ಅವರ ಪುತ್ರ ನವೀನ ಚರಂತಿಮಠ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ವಾಮಬೆ ಕಾಲನಿ ಪ್ರದೇಶದಲ್ಲಿ ಪ್ರಚಾರ ನಡೆಸಿದರು.
ಮತಯಾಚನೆ ವೇಳೆ ಮಾತನಾಡಿದ ವೀರಣ್ಣ ಚರಂತಿಮಠ, ಬಾಗಲಕೋಟೆ ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿಯನ್ನು ಬೆಂಬಲಿಸಬೇಕು. ಈ ಹಿಂದೆ ಬಿಜೆಪಿ ಸರ್ಕಾರದ ಅವಽಯಲ್ಲಿ ಬಾಗಲಕೋಟೆ ಕ್ಷೇತ್ರ ಮತ್ತು ನವನಗರದ ಅಭಿವೃದ್ಧಿಗಾಗಿ ಸಾವಿರಾರು ಕೋಟಿ ರೂ. ಅನುದಾನ ತಂದು ಅಭಿವೃದ್ಧಿ ಪಡಿಸಿದ್ದು, ಈ ಅಭಿವೃದ್ಧಿ ಪರ್ವ ಮುಂದುವರೆಯಲು ಬಿಜೆಪಿಗೆ ನಿಮ್ಮ ಬೆಂಬಲ ಅಗತ್ಯ ಎಂದು ಮನವಿ ಮಾಡಿದರು.
ಕ್ಷೇತ್ರದ ಬೊಮ್ಮಣಗಿ ಗ್ರಾಮದಲ್ಲಿ ಬಿರುಸಿನ ಪ್ರಚಾರ ನಡೆಸಿ ಬಿಜೆಪಿ, ಛಲವಾದಿ ಸಮಾಜದ ಅನೇಕ ಮುಖಂಡರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಬಿಜೆಪಿ ಅಭ್ಯರ್ಥಿ ಪರವಾಗಿ ವಿಜಯಪುರ ಜಿಲ್ಲಾ ಬಿಜೆಪಿ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಜಿಲ್ಲಾ ಓಬಿಸಿ ಪ್ರಧಾನ ಕಾರ್ಯದರ್ಶಿ ಸುಭಾಸಚಂದ್ರ ರಾಮೋಡಗಿ, ದುಂಡಪ್ಪ ಏಳಮ್ಮಿ ಮತ್ತಿತರರು ಮತಯಾಚನೆ ಮಾಡಿದರು.
========
ಕೋಟ್...
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಬಿಜೆಪಿ ಸರ್ಕಾರದ ಅವಽಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅನುದಾನ ತಂದಿದ್ದಾರೆ. ಅಭಿವೃದ್ಧಿಗೆ ಮತ್ತೊಂದು ಹೆಸರು ವೀರಣ್ಣ ಚರಂತಿಮಠ. ಕ್ಷೇತ್ರದ ಮತದಾರರು ಅಭಿವೃದ್ಧಿಗೆ ಒತ್ತು ಕೊಡಬೇಕು. ಚರಂತಿಮಠ ಅವರನ್ನು ಅತ್ಯಂತ ಹೆಚ್ಚು ಮತಗಳ ಅಂತರದಿAದ ಗೆಲ್ಲಿಸುವ ಮೂಲಕ ಬಿಜೆಪಿಯನ್ನು ಬಲಪಡಿಸಬೇಕು.
-ಎಂ.ಡಿ.ಲಕ್ಷಿ÷್ಮÃನಾರಾಯಣ
ಪರಿಷತ್ ಮಾಜಿ ಸದಸ್ಯರು.
==========
ಕೋಟ್...
ಅಭಿವೃದ್ಧಿಯೇ ಬಿಜೆಪಿಯ ಗುರಿ. ಮುಳುಗಡೆ ಬಾಗಲಕೋಟೆ ಸಂತ್ರಸ್ತರಿಗೆ ಸೂಕ್ತ ಪುನರ್ ವಸತಿ ಮತ್ತು ಪುನರ್ ನಿರ್ಮಾಣ ಕಲ್ಪಿಸಲು ಬಿಜೆಪಿ ಸರ್ಕಾರ ಸಾಕಷ್ಟು ಅನುದಾನ ನೀಡಿತ್ತು. ಮೂರು ವರ್ಷ ಅಭಿವೃದ್ಧಿ ಕಾರ್ಯ ನೆನೆಗುದಿಗೆ ಬಿದ್ದಿದ್ದು, ಅವುಗಳಿಗೆ ಮತ್ತೆ ಪುನಶ್ಚೇತನ ನೀಡಲು ಕ್ಷೇತ್ರದ ಮತದಾರರು ಬಿಜೆಪಿಗೆ ಬೆಂಬಲಿಸಿ, ಉಪ ಚುನಾವಣೆಯಲ್ಲಿ ಗೆಲುವು ನೀಡಬೇಕು.