ಬಾಗಲಕೋಟೆ ನಗರದ ವಿದ್ಯಾಗಿರಿಯಲ್ಲಿ ಸಚಿವೆ ಭೈರತಿ ಸುರೇಶ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರ ಪರ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ, ಮಲ್ಲಿಕಾರ್ಜುನ ಮೇಟಿ, ರಕ್ಷಿತಾ ಭರತಕುಮಾರ ಈಟಿ, ಶ್ರೀಶೈಲ ದಳವಾಯಿ ಇತರರು ಇದ್ದರು.
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಪರ ವಿದ್ಯಾಗಿರಿ ಸೇರಿ ಅನೇಕ ಕಡೆ ಮನೆ ಮನೆಗೆ ತೆರಳಿ ಮತ ಯಾಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಾಗಲಕೋಟೆ ಮತ್ತು ಸುತ್ತಮುತ್ತಲಿನ ಜನರು ನಮ್ಮ ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ಬೇಕೆಂಬ ಬೇಡಿಕೆ ಇಡುತ್ತಲೇ ಬಂದಿದ್ದರು. ಹಿಂದಿನ ಬಿಜೆಪಿ ಸರ್ಕಾರ ಈ ಬಗ್ಗೆ ನಿರ್ಲಕ್ಷ÷್ಯ ವಹಿಸಿತ್ತು. ಆದರೆ ಎಚ್.ವೈ.ಮೇಟಿ ಶಾಸಕರಾದ ಬಳಿಕ ಬಾಗಲಕೋಟೆಗೆ ವೈದ್ಯಕೀಯ ಕಾಲೇಜು ಮಂಜೂರು ಮಾಡಿಸುವಲ್ಲಿ ಯಶಸ್ವಿಯಾಗಿದ್ದರು ಎಂದರು.
ಮುಖ್ಯಮAತ್ರಿ ಸಿದ್ದರಾಮಯ್ಯ ಅವರು ಹಲವಾರು ಭಾಗ್ಯಗಳನ್ನು ರಾಜ್ಯದ ಜನತೆಗೆ ನೀಡಿದ್ದಲ್ಲದೇ, ಕಳೆದ ಮೂರು ವರ್ಷಗಳಿಂದ ಪಂಚ ಗ್ಯಾರಂಟಿ ಕಾರ್ಯಕ್ರಮಗಳನ್ನು ನೀಡುವ ಮೂಲಕ ಲಕ್ಷಾಂತರ ಬಡ ಕುಟುಂಬಗಳಿಗೆ ಆರ್ಥಿಕ ಸಬಲರನ್ನಾಗಿ ಮಾಡಿದ್ದಾರೆ ಎಂದು ತಿಳಿಸಿದರು.
ಎಚ್.ವೈ.ಮೇಟಿ ತಮ್ಮ ಅಽಕಾರ ಅವಽಯಲ್ಲಿ ಬಾಗಲಕೋಟೆ ಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಉಮೇಶ ಮೇಟಿ ಅವರು ಜನಪರ ಕಾಳಜಿ ಹೊಂದಿದ್ದಾರೆ. ಉಮೇಶ ಅವರಿಗೆ ಅಮೂಲ್ಯವಾದ ಮತ ಚಲಾಯಿಸಿ ಗೆಲುವು ತಂದುಕೊಡಬೇಕು. ಬಿಜೆಪಿ ಯಾವುದೇ ಅಭಿವೃದ್ಧಿ ಮಾಡಿಲ್ಲ. ಸುಳ್ಳು ಹೇಳಿಕೆ ನೀಡಿ ಜನರಿಗೆ ಮೋಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ನಡುವೆ ಸಚಿವ ಬೈರತಿ ಸುರೇಶ ಅವರು ಸ್ಥಳೀಯ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಜೊತೆ ಸಭೆ ನಡೆಸಿ ರಾಜ್ಯ ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳನ್ನು ವಿವರಿಸಿ ಮತದಾರರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಅವರ ಗೆಲುವಿಗೆ ಶ್ರಮ ವಹಿಸಬೇಕು ಎಂದು ಕಿವಿ ಮಾತು ಹೇಳಿದರು.
ಶಾಸಕ ರಾಘವೇಂದ್ರ ಹಿಟ್ನಾಳ, ಮಲ್ಲಿಕಾರ್ಜುನ ಮೇಟಿ, ರಕ್ಷಿತಾ ಭರತಕುಮಾರ ಈಟಿ, ಶ್ರೀಶೈಲ ದಳವಾಯಿ ಇತರರು ಇದ್ದರು.