ಅಗತ್ಯವಿರುವ ದುರಸ್ತಿ ಕಾಮಗಾರಿ ಕೈಗೊಳ್ಳಿ

 ಜಮಖಂಡಿ ಪಿಬಿ ಹೈಸ್ಕೂಲ್ ಗೆ ಜಿಲ್ಲಾಧಿಕಾರಿ ಸಂಗಪ್ಪ ಎಂ. ಭೇಟಿ ನೀಡಿ ಮಕ್ಕಳೊಂದಿಗೆ ಸಂವಾದ ನಡೆಸಿದರು. ಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ತಹಸೀಲ್ದಾರ್ ಅನೀಲ ಬಡಿಗೇರ, ಆಯುಕ್ತ ಜ್ಯೋತಿ ಗಿರೀಶ ಎಸ್. ಇದ್ದರು.
ಜಮಖಂಡಿ ಪಿಬಿ ಹೈಸ್ಕೂಲ್ ಗೆ ಜಿಲ್ಲಾಧಿಕಾರಿ ಸಂಗಪ್ಪ ಎಂ. ಭೇಟಿ ನೀಡಿ ಮಕ್ಕಳೊಂದಿಗೆ ಸಂವಾದ ನಡೆಸಿದರು. ಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ತಹಸೀಲ್ದಾರ್ ಅನೀಲ ಬಡಿಗೇರ, ಆಯುಕ್ತ ಜ್ಯೋತಿ ಗಿರೀಶ ಎಸ್. ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಧಿಕಾರಿ ಸಂಗಪ್ಪ ಎಂ. ಸೂಚನೆ
  • ಎಸ್‌ಡಿಎಂಎಫ್ ಕಾಮಗಾರಿ ಪರಿಶೀಲನೆ
  • ಶಾಲಾ ಮಕ್ಕಳೊಂದಿಗೆ ಸಂವಾದ
ಬಾಗಲಕೋಟೆ:

ಜಮಖಂಡಿ ನಗರಕ್ಕೆ ಜಿಲ್ಲಾಧಿಕಾರಿ ಸಂಗಪ್ಪ ಎಂ. ಶುಕ್ರವಾರ ಭೇಟಿ ನೀಡಿ ಶಾಲಾ ಕಟ್ಟಡ, ನಗರಸಭೆ ಚಟುವಟಿಕೆಗಳು ಹಾಗೂ ಎಸ್‌ಡಿಎಂಎಫ್ ಅನುದಾನದಡಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದರು.

ಜಮಖಂಡಿ ನಗರದ ಪರಶುರಾಮ ಬಾಹುರಾವ ಪಟವರ್ಧನ (ಪಿ.ಬಿ.ಹೈಸ್ಕೂಲ) ಶಾಲೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, 1979ರಲ್ಲಿ ನಿರ್ಮಾಣಗೊಂಡಿರುವ ಶಾಲಾ ಕಟ್ಟಡವನ್ನು ವೀಕ್ಷಿಸಿದರು. ಕಟ್ಟಡದ ಸ್ಥಿತಿಗತಿಯನ್ನು ಪರಿಶೀಲಿಸಿ, ಕಟ್ಟಡ ಸುಸ್ಥಿತಿಯಲ್ಲಿರುವುದರಿಂದ ಸಮರ್ಪಕವಾಗಿ ಹಾಗೂ ಉತ್ತಮ ರೀತಿಯಲ್ಲಿ ಬಳಸಿಕೊಳ್ಳುವಂತೆ ಶಾಲಾ ಶಿಕ್ಷಕರಿಗೆ ಸೂಚಿಸಿದರು. ಶಾಲೆಯ ಕಿಟಕಿ, ಬಾಗಿಲು ಹಾಗೂ ಮೇಲ್ಚಾವಣಿಗೆ ಅಗತ್ಯವಿರುವ ದುರಸ್ತಿ ಕಾಮಗಾರಿ ಕೈಗೊಳ್ಳುವಂತೆ ಆಯುಕ್ತರಿಗೆ ನಿರ್ದೇಶನ ನೀಡಿದರು. ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು, ಶಿಕ್ಷಕರ ಬೋಧನಾ ವಿಧಾನ, ಮಕ್ಕಳ ಕಲಿಕಾ ಚಟುವಟಿಕೆ ಹಾಗೂ ಮಧ್ಯಾಹ್ನದ ಬಿಸಿಯೂಟದ ಕುರಿತು ಮಾಹಿತಿ ಪಡೆದುಕೊಂಡರು.
ನಂತರ ಜಮಖಂಡಿ ನಗರಸಭೆ ಕಚೇರಿಗೆ ಭೇಟಿ ನೀಡಿದ ಅವರು, ಆಸ್ತಿ ತೆರಿಗೆ, ನೀರಿನ ಕರ ಸಂಗ್ರಹ ಹಾಗೂ ನಗರಸಭೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಆಯುಕ್ತರು ಮತ್ತು ಸಿಬ್ಬಂದಿಯೊಂದಿಗೆ ವಿವರವಾಗಿ ಚರ್ಚಿಸಿದರು. ನಗರಸಭೆಯ ಆದಾಯ ಮೂಲಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವುದು, ತೆರಿಗೆ ಸಂಗ್ರಹವನ್ನು ಸುಧಾರಿಸುವುದು ಹಾಗೂ ಸಾರ್ವಜನಿಕರಿಗೆ ಅಗತ್ಯ ಮೂಲಸೌಕರ್ಯ ಸಮರ್ಪಕವಾಗಿ ಒದಗಿಸುವ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಬಳಿಕ ಎಸ್‌ಡಿಎಂಎ್ ಅನುದಾನದಡಿ ಕೈಗೊಂಡಿರುವ 179 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ಕಾಮಗಾರಿಗಳ ಪ್ರಗತಿ, ಗುಣಮಟ್ಟ ಹಾಗೂ ಅನುಷ್ಠಾನದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ವೇಳೆ ನಗರಸಭೆ ಅಭಿಯಂತರರೊಂದಿಗೆ ಲಕ್ಕನಕೆರೆ ಬೈಪಾಸ್ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕುರಿತು ಚರ್ಚಿಸಿದ ಜಿಲ್ಲಾಧಿಕಾರಿಗಳು, ರಸ್ತೆ ಮತ್ತು ಚರಂಡಿ ಕಾಮಗಾರಿಗಳನ್ನು ಸಾರ್ವಜನಿಕರಿಗೆ ಗರಿಷ್ಠ ಅನುಕೂಲವಾಗುವ ರೀತಿಯಲ್ಲಿ ಕೈಗೊಳ್ಳುವಂತೆ ಸೂಚಿಸಿದರು.
ಸಾರ್ವಜನಿಕರಿಗೆ ಅಗತ್ಯ ಮೂಲಸೌಕರ್ಯ, ಉತ್ತಮ ರಸ್ತೆ ಹಾಗೂ ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿಗಳ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ತಹಸೀಲ್ದಾರ್ ಅನೀಲ ಬಡಿಗೇರ, ಆಯುಕ್ತ ಜ್ಯೋತಿ ಗಿರೀಶ ಎಸ್., ಅಭಿಯಂತರಾದ ಸುಭಾಷ ಚೌಗಲಾ, ವೈಶಾಲಿ ಹಿಪ್ಪರಗಿ ಹಾಗೂ ಕಂದಾಯ ಅಧಿಕಾರಿ ಯಲ್ಲಪ್ಪ ಬಿದರಿ ಸೇರಿ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net