ಈಗಾಗಲೇ ಮತ ಎಣಿಕೆ ಕೇಂದ್ರ ಸಂಪೂರ್ಣ ಸಜ್ಜಾಗಿದ್ದು, ಚುನಾವಣಾ ಆಯೋಗದ ನಿರ್ದೇಶನಗಳನ್ವಯ ಎಣಿಕೆ ಕಾರ್ಯವನ್ನು ಯಶಸ್ವಿಯಾಗಿ ನಡೆಸಬೇಕು. ಮತ ಎಣಿಕೆಗೆ ಒಟ್ಟು 14 ಟೇಬಲ್‌ಗಳನ್ನು ಇರಿಸಲಾಗಿದ್ದು, ಪ್ರತಿ ಟೇಬಲ್‌ಗೆ ತಲಾ ಒಬ್ಬರಂತೆ ಮತ ಎಣಿಕಾ ಮೇಲ್ವಿಚಾರಕ, ಸಹಾಯಕ ಮತ್ತು ಮೈಕ್ರೋ ವೀಕ್ಷಕರು ಸೇರಿ ಒಟ್ಟು 63 ಸಿಬ್ಬಂದಿಗಳು ಕಾರ್ಯನಿರ್ವಹಿಸಲಿದ್ದಾರೆ. ಅಂಚೆ ಮತಪತ್ರ ಎಣಿಕೆಗೆ ಪ್ರತ್ಯೇಕ ಕೊಠಡಿ ಇದ್ದು, 2 ಟೇಬಲ್ ಇರಿಸಲಾಗಿದೆ. ಸ್ಕ್ಯಾನಿಂಗ್ ಮಾಡಲು ಟೇಬಲ್ ಸಹ ಇರಿಸಲಾಗಿದೆ ಎಂದು ತಿಳಿಸಿದರು.