ಶಾಂತಿಯಿಂದ ಬಕ್ರೀದ್ ಹಬ್ಬ ಆಚರಿಸಿ

ಕಮತಗಿ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಬುಧವಾರ ನಡೆದ ಬಕ್ರೀದ್ ಹಬ್ಬದ ಶಾಂತಿ ಸಭೆಯಲ್ಲಿ ಅಮೀನಗಡ ಪಿಎಸ್‌ಐ ಜೋತಿ ವಾಲಿಕಾರ ಮಾತನಾಡಿದರು. ಪಪಂ ಅಧ್ಯಕ್ಷ ಬಸವರಾಜ ಕುಂಬಳಾವತಿ ಮತ್ತಿತರರಿದ್ದರು.
ಕಮತಗಿ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಬುಧವಾರ ನಡೆದ ಬಕ್ರೀದ್ ಹಬ್ಬದ ಶಾಂತಿ ಸಭೆಯಲ್ಲಿ ಅಮೀನಗಡ ಪಿಎಸ್‌ಐ ಜೋತಿ ವಾಲಿಕಾರ ಮಾತನಾಡಿದರು. ಪಪಂ ಅಧ್ಯಕ್ಷ ಬಸವರಾಜ ಕುಂಬಳಾವತಿ ಮತ್ತಿತರರಿದ್ದರು.
Published on
ವಿಜಯವಾಣಿ ಸುದ್ದಿಜಾಲ, ಕಮತಗಿ
ಬಕ್ರೀದ್ ಹಬ್ಬವನ್ನು ಶಾಂತಿ ಮತ್ತು ಸೌಹಾರ್ಧತೆಯಿಂದ ಆಚರಿಸಬೇಕು ಎಂದು ಅಮೀನಗಡ ಪಿಎಸ್‌ಐ ಜ್ಯೋತಿ ವಾಲಿಕಾರ ಹೇಳಿದರು.
ಪಟ್ಟಣದ ಪಂಚಾಯಿತಿ ಕಾರ್ಯಾಲಯದಲ್ಲಿ ಬುಧವಾರ ನಡೆದ ಬಕ್ರೀದ್ ಹಬ್ಬ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಸಂಭ್ರಮದಿಂದ ಹಬ್ಬವನ್ನು ಆಚರಿಸಿ, ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ ಕಾನೂನಿನ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ಶಾಂತಿ ಹಾಗೂ ಸೌಹಾರ್ಧತೆಯಿಂದ ಆಚರಿಸಬೇಕು, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡದೆ ಶಾಂತಿ ರೀತಿಯಿಂದ ಹಬ್ಬವನ್ನು ಆಚರಿಸಬೇಕು ಎಂದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷ ಬಸವರಾಜ ಕುಂಬಳಾವತಿ, ಸದಸ್ಯರಾದ ಸಂಗಪ್ಪ ಗಾಣಗೇರ, ಹುಚ್ಚೇಶ ಮದ್ಲಿ, ಬಸವರಾಜ ದಂಡಾವತಿ, ಪಿಕೆಪಿಎಸ್ ಅಧ್ಯಕ್ಷ ಸಿದ್ದು ಹೊಸಮನಿ, ಮುಖಂಡರಾದ ರಮೇಶ ಲಮಾಣಿ, ತಿಮ್ಮನ್ನ ಹಗೇದಾಳ, ನಾಗೇಶ ಮುರಾಳ ಉಪಸ್ಥಿತರಿದ್ದರು. ರಮೇಶ ಪದಕಿ ನಿರೂಪಿಸಿ, ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net