ಶಾಂತಿ, ಸೌಹಾರ್ದತೆಯಿಂದ ಹಬ್ಬ ಆಚರಿಸಿ

ಬಾಗಲಕೋಟೆ ಜಿಪಂ ಸಭಾಭವನದಲ್ಲಿ ಶನಿವಾರ ಈದ್-ಮಿಲಾದ ಹಬ್ಬದ ಹಿನ್ನೆಲೆ ಜಿಲ್ಲಾಽಕಾರಿ ಸಂಗಪ್ಪ ಅಧ್ಯಕ್ಷೆಯಲ್ಲಿ ಶಾಂತತಾ ಸಭೆ ನಡೆಯಿತು. ಜಿಪಂ ಸಿಇಒ ಗಜಾನನ ಬಾಲೆ, ಎಸ್ಪಿ ಸಿದ್ಧಾರ್ಥ ಗೋಯಲ್ ಹಾಗೂ ಇತರರು ಇದ್ದರು.
ಬಾಗಲಕೋಟೆ ಜಿಪಂ ಸಭಾಭವನದಲ್ಲಿ ಶನಿವಾರ ಈದ್-ಮಿಲಾದ ಹಬ್ಬದ ಹಿನ್ನೆಲೆ ಜಿಲ್ಲಾಽಕಾರಿ ಸಂಗಪ್ಪ ಅಧ್ಯಕ್ಷೆಯಲ್ಲಿ ಶಾಂತತಾ ಸಭೆ ನಡೆಯಿತು. ಜಿಪಂ ಸಿಇಒ ಗಜಾನನ ಬಾಲೆ, ಎಸ್ಪಿ ಸಿದ್ಧಾರ್ಥ ಗೋಯಲ್ ಹಾಗೂ ಇತರರು ಇದ್ದರು.
Published on

ಪ್ರವಾದಿ ಹಜರತ್ ಮಹಮ್ಮದ್ ಪೈಗಂಬರ ಅವರ ಜನ್ಮದಿನದ ಸ್ಮರಣಾರ್ಥ ಆಗಸ್ಟ ೨೬ ರಂದು ಆಚರಿಸಲಾಗುವ ಈದ್-ಮಿಲಾದ ಹಬ್ಬವನ್ನು ಜಿಲ್ಲಾದ್ಯಂತ ಶಾಂತಿಯುತ ಹಾಗೂ ಸೌಹಾರ್ದಯುತವಾಗಿ ಆಚರಿಸುವಂತೆ ಜಿಲ್ಲಾಽಕಾರಿ ಸಂಗಪ್ಪ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಭಭವನದಲ್ಲಿ ಶನಿವಾರ ಈದ್-ಮಿಲಾದ ಹಬ್ಬದ ನಿಮಿತ್ಯ ಕರೆಯಲಾಗಿದ್ದ ಶಾಂತತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈದ್-ಮಿಲಾದ ಹಬ್ಬವು ಪ್ರೀತಿ, ಸಹೋದರತ್ವ, ಶಾಂತಿ ಹಾಗೂ ಸೌಹಾರ್ದತೆಯ ಸಂದೇಶ ಸಾರುವ ಹಬ್ಬವಾಗಿದ್ದು, ಎಲ್ಲರೂ ಪರಸ್ಪರ ಗೌರವ ಹಾಗೂ ಸಹಬಾಳ್ವೆಯೊಂದಿಗೆ ಹಬ್ಬ ಆಚರಿಸಬೇಕು ಎಂದರು.
ಹಬ್ಬದ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಮುನ್ನಚ್ಚರಿಗೆ ಕ್ರಮಕೈಗೊಳ್ಳುವುದು ಹಾಗೂ ಎಲ್ಲ ಸಮುದಾಯಗಳ ನಡುವೆ ಶಾಂತಿ ಮತ್ತು ಸೌಹಾರ್ದತೆ ಕಾಪಾಡಬೇಕು. ಹಬ್ಬದ ಸಂದರ್ಭದಲ್ಲಿ ಡಿಜೆಗೆ ಅವಕಾಶ ಕಲ್ಪಿಸದಂತೆ ಸಮುದಾಯದ ಮುಖಂಡರು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಮನವಿ ಮಾಡಿಕೊಂಡಿರುವುದು ಸ್ವಾಗತಾರ್ಹ. ಇದು ಎಲ್ಲರಿಗೂ ಮಾದರಿಯಾಗಬೇಕು ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಸಿದ್ದಾರ್ಥ ಗೋಯಲ್ ಮಾತನಾಡಿ, ಈದ್-ಮಿಲಾದ್ ಅಂಗವಾಗಿ ನಡೆಯುವ ಮೆರವಣಿಗೆ, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿನ ಚಟುವಟಿಕೆಗಳಿಗೆ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ್, ಸಂಚಾರ ವ್ಯವಸ್ಥೆ ಮಾಡಲಾಗುತ್ತದೆ. ಪೊಲೀಸ್ ಇಲಾಖೆ ತಮ್ಮ ಜೊತೆಯಲ್ಲಿ ಇದ್ದು, ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಯಾವುದೇ ರೀತಿ ಶಾಂತಿ, ಸುವ್ಯವಸ್ಥೆಗೆ ದಕ್ಕೆ ಬರದ ರೀತಿಯಲ್ಲಿ ಹಬ್ಬ ಆಚರಣೆಯಾಗಬೇಕು. ಜಿಲ್ಲೆಯ ಎಲ್ಲ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸಭೆಗಳನ್ನು ಸಹ ನಡೆಸಲಾಗುತ್ತಿದೆ ಎಂದರು.
ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಗಜಾನನ ಬಾಲೆ ಮಾತನಾಡಿ, ಶಾಂತಿಯುತವಾಗಿ ಈದ್-ಮಿಲಾದ ಹಬ್ಬ ಆಚರಣೆಗೆ ಜಿಲ್ಲಾಡಳಿತ ಸಭೆ ಕರೆದ ಹಾಗೆ ತಮ್ಮ ತಮ್ಮ ಹಂತದಲ್ಲಿ ಸಭೆಗಳನ್ನು ಸಹ ನಡೆಸಲು ತಿಳಿಸಿದ ಅವರು, ಗ್ರಾಮೀಣ ಭಾಗದಲ್ಲಿ ಸ್ವಚ್ಚತಾ ಕಾರ್ಯಕ್ಕೆ ಕ್ರಮವಹಿಸಲಾಗುವುದೆಂದು ತಿಳಿಸಿದರು.
ಸಮುದಾಯದ ಮುಖಂಡ ಶಿಕಂದರ ಅಥಣಿ ಮಾತನಾಡಿ, ಬಾಗಲಕೋಟೆ ನಗರದಲ್ಲಿ ಆಗಸ್ಟ ೨೫ ರಿಂದ ೨೭ ವರೆಗೆ ಮೂರು ದಿನಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಮೊದಲ ದಿನ ಅಂಜುಮನ್ ಶಿಕ್ಷಣ ಸಂಸ್ಥೆ ಆವರಣದಲ್ಲಿ, ಎರಡನೇ ದಿನ ಹಳೆಯ ಬಾಗಲಕೋಟೆಯಲ್ಲಿ ಹಾಗೂ ಮೂರನೇ ದಿನ ನವನಗರದ ವ್ಯಾಪ್ತಿಯಲ್ಲಿ ಭವ್ಯ ಮೆರವಣಿಗೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಭೆಗೆ ತಿಳಿಸಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಽಕಾರಿ ಜಗದೀಶ ಆರ್, ಉಪ ವಿಭಾಗಾಽಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಡಿಎಸ್ಪಿ ಎಸ್‌ಪಿ ಗಜಾನನ ಸುತಾರ, ವಿವಿಧ ಸಮುದಾಯಗಳ ಮುಖಂಡರಾದ ಎ.ಎ.ದಾಂಡಿಯಾ, ಅಬ್ದುಲ್ ರಜಾಕ್ ಬೇಪಾರಿ, ಅಕ್ಬರಸಾಬ ಮಿರಜಕರ, ಅಮೀನಸಾಬ ರಕ್ಕಸಗಿ, ಮಹಾಬಳೇಶ ಗುಡಗುಂಟಿ, ರಾಮಕಿಶನ್ ಮುಂಡಾಸ, ಉಮೇಶ ಹಂಚಿನಾಳ, ರಮೇಶ ಬಂಡಿವಡ್ಡರ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net