ಪಂಚಮಸಾಲಿ ಸಮಾಜದ ಬೇಡಿಕೆ ಈಡೇರಿಸಲು ಬದ್ಧ

ಬಾಗಲಕೋಟೆ ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪಂಚಮಸಾಲಿ ಮುಖಂಡರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು. ಸಚಿವ ಆರ್.ಬಿ. ತಿಮ್ಮಾಪೂರ, ಶಾಸಕ ವಿಜಯಾನಂದ ಕಾಶಪ್ಪನವರ, ಜಿ.ಪಂ. ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ, ಅಭ್ಯರ್ಥಿ ಉಮೇಶ ಮೇಟಿ ಇದ್ದರು.
ಬಾಗಲಕೋಟೆ ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪಂಚಮಸಾಲಿ ಮುಖಂಡರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು. ಸಚಿವ ಆರ್.ಬಿ. ತಿಮ್ಮಾಪೂರ, ಶಾಸಕ ವಿಜಯಾನಂದ ಕಾಶಪ್ಪನವರ, ಜಿ.ಪಂ. ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ, ಅಭ್ಯರ್ಥಿ ಉಮೇಶ ಮೇಟಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ
  • ಖಾಸಗಿ ಹೋಟೆಲ್‌ನಲ್ಲಿ ಮುಖಂಡರ ಸಭೆ ಆಯೋಜನೆ
  • ದಿ. ಎಚ್.ವೈ. ಮೇಟಿ ಅವರು ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ
ಬಾಗಲಕೋಟೆ: ಪಂಚಮಸಾಲಿ ಸಮಾಜದ ಮೀಸಲಾತಿ ಸೇರಿ ಎಲ್ಲ ಬೇಡಿಕೆಗಳನ್ನು ಆದ್ಯತೆ ಮೇಲೆ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪಂಚಮಸಾಲಿ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಸಮಾಜ ಬಂಧುಗಳು ಪಕ್ಷಕ್ಕೆ ನಿರಂತರ ಬೆಂಬಲ ನೀಡುತ್ತಿದ್ದು, ಪ್ರಸಕ್ತ ಚುನಾವಣೆಯಲ್ಲೂ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರನ್ನು ಬೆಂಬಲಿಸಬೇಕು ಎಂದು ಕೋರಿದರು.
ದಿ. ಎಚ್.ವೈ. ಮೇಟಿ ಅವರು ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಅಭಿವೃದ್ಧಿ ಬಗ್ಗೆ ಅವರು ಇನ್ನೂ ಸಾಕಷ್ಟು ಕನಸುಗಳನ್ನು ಕಂಡಿದ್ದರು. ಆ ಕನಸುಗಳು ಸಾಕಾರಗೊಳ್ಳಲು ಮತ್ತೊಮ್ಮೆ ಕಾಂಗ್ರೆಸ್‌ಗೆ ಮತ ನೀಡಬೇಕು. ನಿಮ್ಮ ಸಮಾಜದ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದರು.
ಸಮಾಜದ ಪರವಾಗಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಮಾತನಾಡಿ, ಸಮಾಜದ ಎಲ್ಲ ಬಂಧುಗಳು ಪಕ್ಷದ ಬೆಂಬಲಕ್ಕೆ ನಿಂತಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಲ್ಲ ಭರವಸೆಗಳನ್ನು ಈಡೇರಿಸಲಿದೆ ಎಂಬ ವಿಶ್ವಾಸವಿದೆ. ಮತ್ತೊಮ್ಮೆ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸೋಣ ಎಂದರು.
ಸಚಿವ ಆರ್.ಬಿ. ತಿಮ್ಮಾಪುರ, ಶಾಸಕ ವಿಜಯಾನಂದ ಕಾಶಪ್ಪನವರ, ಉಮೇಶ ಮೇಟಿ, ಮಾಜಿ ಸಚಿವ ಎಸ್.ಆರ್. ಪಾಟೀಲ, ಅಜಯಕುಮಾರ ಸರನಾಯಕ, ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಮಲ್ಲಿಕಾರ್ಜುನ ಮೇಟಿ, ನಾಗರಾಜ ಹದ್ಲಿ, ಆನಂದ ಜಿಗಜಿನ್ನಿ, ಚೆನ್ನವೀರ ಅಂಗಡಿ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net