ಬಾದಾಮಿ ನಗರದಲ್ಲಿ 16 ಕೋಟಿ ರೂ. ವೆಚ್ಚದಲ್ಲಿ ನೂತನ ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅಡಿಗಲ್ಲು ಭೂಮಿಪೂಜೆ ನೆರವೇರಿಸಿದರು. ಈರಣ್ಣ ಕರಿಗೌಡರ, ಅಶೋಕ ಕೋಟನಕರ, ಶಿವುಕುಮಾರ ಹಿರೇಮಠ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿಕೆ
16 ಕೋಟಿ ರೂ. ವೆಚ್ಚದಲ್ಲಿ ನೂತನ ಹೈಟೆಕ್ ಬಸ್ ನಿಲ್ದಾಣಕ್ಕೆ ಭೂಮಿಪೂಜೆ
ಐತಿಹಾಸಿಕ ಚಾಲುಕ್ಯರ ರಾಜಧಾನಿ, ಪ್ರವಾಸಿ ತಾಣ ಬಾದಾಮಿ ನಗರಕ್ಕೆ ಪ್ರತಿ ದಿನ ಸಾವಿರಾರು ಪ್ರವಾಸಿಗರು ಬರುತ್ತಿದ್ದಾರೆ
ಬಾದಾಮಿ:
ಐತಿಹಾಸಿಕ ಚಾಲುಕ್ಯರ ರಾಜಧಾನಿ, ಪ್ರವಾಸಿ ತಾಣ ಬಾದಾಮಿ ನಗರಕ್ಕೆ ಪ್ರತಿ ದಿನ ಸಾವಿರಾರು ಪ್ರವಾಸಿಗರು ಬರುತ್ತಿದ್ದಾರೆ. ಪ್ರವಾಸೋದ್ಯಮಕ್ಕೆ ಪೂರಕ ಕೆಲಸ ಮಾಡಲು ಬದ್ಧ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.
ನಗರದ ಬಸ್ ನಿಲ್ದಾಣದಲ್ಲಿ ಶನಿವಾರ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಾಗಲಕೋಟೆ ವಿಭಾಗ ಮತ್ತು ಲೋಕೋಪಯೋಗಿ ಇಲಾಖೆಯ ವತಿಯಿಂದ ರೂ.16 ಕೋಟಿ ವೆಚ್ಚದಲ್ಲಿ ನೂತನ ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಅಡಿಗಲ್ಲು ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಬಾದಾಮಿಗೆ ದೇಶ-ವಿದೇಶಗಳಿಂದ ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದು, ಪ್ರಯಾಣಿಕರಿಗೆ ಆಧುನಿಕ ಹಾಗೂ ಗುಣಮಟ್ಟದ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಹಳೆಯ ಬಸ್ ನಿಲ್ದಾಣ ತೆರವುಗೊಳಿಸಿ ಅತ್ಯಾಧುನಿಕ ಮಾದರಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಶಿಕ್ಷಣ, ಆರೋಗ್ಯ, ಮೂಲ ಸೌಕರ್ಯಗಳನ್ನು ಒದಗಿಸುವ ಮೂಲಕ ಪ್ರಯಾಣಿಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವ ಗುರಿ ಹೊಂದಿದ್ದೇವೆ ಎಂದು ಹೇಳಿದರು.
ವಿಜಯಪುರ-ಬಾಗಲಕೋಟೆ ಹಾಲು ಒಕ್ಕೂಟದ ನಿರ್ದೇಶಕ ಈರಣ್ಣ ಕರಿಗೌಡರ, ಮುಖಂಡ ಅಶೋಕ ಕೋಟನಕರ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ದೇವದಾಸ ಮಾತನಾಡಿದರು.