ಬಳಿಕ ಪವಿತ್ರ ವನಕ್ಕೆ ಭೇಟಿ ನೀಡಿ ಪರಿಸರ ಸಂರಕ್ಷಣೆ, ವೃಕ್ಷಾರೋಪಣ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗೆ ಕೈಗೊಂಡಿರುವ ಕ್ರಮಗಳನ್ನು ವೀಕ್ಷಿಸಿದರು. ಖಾನಾಪುರ ಎಸ್.ಕೆ. ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕುಳಗೇರಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದರು. ಕೊಠಡಿಗಳು, ವಿದ್ಯಾರ್ಥಿಗಳ ಹಾಜರಾತಿ, ಕಲಿಕಾ ಗುಣಮಟ್ಟ, ಶಾಲೆಯ ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯ ಹಾಗೂ ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆಯನ್ನು ಪರಿಶೀಲಿಸಿದರು. ಮಲ್ಲಾಪೂರ ಎಸ್.ಎಲ್. ಕೆರೆಗೆ ಭೇಟಿ ನೀಡಿ ಕೆರೆಯ ಅಭಿವೃದ್ಧಿ, ನೀರಿನ ಸಂಗ್ರಹ ಸಾಮರ್ಥ್ಯ, ಸಂರಕ್ಷಣೆ ಹಾಗೂ ನಿರ್ವಹಣಾ ಕಾಮಗಾರಿಗಳನ್ನು ವೀಕ್ಷಿಸಿದರು.