ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ

ಬಾಗಲಕೋಟೆಯ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಪ್ರಭಾರ ಅಪರ ಜಿಲ್ಲಾಧಿಕಾರಿ ಮಹೇಶ ಮಾಲಗಿತ್ತಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಂಡಲೀಕ ಕಾಂಬಳೆ ಇದ್ದರು.
ಬಾಗಲಕೋಟೆಯ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಪ್ರಭಾರ ಅಪರ ಜಿಲ್ಲಾಧಿಕಾರಿ ಮಹೇಶ ಮಾಲಗಿತ್ತಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಂಡಲೀಕ ಕಾಂಬಳೆ ಇದ್ದರು.ಬಾಗಲಕೋಟೆಯ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಪ್ರಭಾರ ಅಪರ ಜಿಲ್ಲಾಧಿಕಾರಿ ಮಹೇಶ ಮಾಲಗಿತ್ತಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಂಡಲೀಕ ಕಾಂಬಳೆ ಇದ್ದರು.
Published on: 

ವಿಜಯವಾಣಿ ಸುದ್ದಿಜಾಲ ಬಾಗಲಕೋಟೆ

ಜಿಲ್ಲೆಯಲ್ಲಿ ಅಕ್ಟೋಬರ ೨ರಂದು ಭೂಮಾಪಕರ ಹಾಗೂ ೪ರಂದು ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಭಾರಿ ಅಪರ ಜಿಲ್ಲಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಆಡಿಟೋರಿಯಂ ಹಾಲ್‌ನಲ್ಲಿ ಬುಧವಾರ ಭೂಮಾಪಕರ ಹಾಗೂ ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಭೂಮಾಪಕರ ನೇಮಕಾತಿ ಪರೀಕ್ಷೆಗೆ ಒಟ್ಟು ೫,೯೩೫ ಅಭ್ಯರ್ಥಿಗಳು ಹಾಜರಾಗಲಿದ್ದು, ಬಾಗಲಕೋಟೆ ನಗರದಲ್ಲಿ ೧೪ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದರು.

ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ ಪರೀಕ್ಷೆಗೆ ಒಟ್ಟು ೨೭,೬೦೦ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದಕ್ಕಾಗಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಒಟ್ಟು ೫೪ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಬಾಗಲಕೋಟೆ ನಗರದಲ್ಲಿ ೨೪, ಬಾದಾಮಿಯಲ್ಲಿ ೨, ಬೀಳಗಿಯಲ್ಲಿ ೫, ಹುನಗುಂದದಲ್ಲಿ ೨, ಇಳಕಲ್ಲಿನಲ್ಲಿ ೧, ಜಮಖಂಡಿಯಲ್ಲಿ ೯, ಮುಧೋಳದಲ್ಲಿ ೫, ರಬಕವಿ-ಬನಹಟ್ಟಿಯಲ್ಲಿ ೫ ಹಾಗೂ ತೇರದಾಳದಲ್ಲಿ ೧ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಈ ಎರಡು ಹುದ್ದೆಗಳ ನೇಮಕಾತಿ ಪರೀಕ್ಷೆಗಳನ್ನು ಯಾವುದೇ ಗೊಂದಲ, ಲೋಪಗಳಿಗೆ ಅವಕಾಶವಿಲ್ಲದಂತೆ ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಭದ್ರತೆ ಕಾಪಾಡುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿನ ವ್ಯವಸ್ಥೆಯನ್ನು ಜಿಲ್ಲಾ ಮಟ್ಟದಲ್ಲಿ ಮೇಲ್ವಿಚಾರಣೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಗ್ರಾಮ ಆಡಳಿತಾಧಿಕರಿ ನೇಮಕಾತಿ ಪರೀಕ್ಷೆಗೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಹಾಜರಾಗಲಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅಗತ್ಯ ಸಾರಿಗೆ ವ್ಯವಸ್ಥೆ ಕಲ್ಪಿಸುವ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಕರ್ಯ, ಅಭ್ಯರ್ಥಿಗಳಿಗೆ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸೇರಿ ಅಗತ್ಯ ಸೌಲಭ್ಯಗಳನ್ನು ಸಮಪರ್ಕವಾಗಿ ಕಲ್ಪಿಸುವಂತೆ ಸೂಚಿಸಿ, ಪರೀಕ್ಷಾ ಕೇಂದ್ರಗಳಲ್ಲಿ ಹೆಸ್ಕಾಂ ವತಿಯಿಂದ ನಿರಂತರ ವಿದ್ಯುತ್ ಸರಬರಾಜು ಕಲ್ಪಿಸಲು ತಿಳಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ವ್ಯವಸ್ಥೆ, ಅಭ್ಯರ್ಥಿಗಳ ಫ್ರಿಸ್ಕಿಂಗ್, ಕ್ಯೂಆರ್ ಕೋಡ್ ಆಧಾರಿತ ಗುರುತು ಪರಿಶೀಲನೆ, ಪೊಲೀಸ್ ಬಂದೋಬಸ್ತ್ಗಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್ ಕೇಂದ್ರಗಳು, ಸೈಬರ್ ಸೆಂಟರ್ ಹಾಗೂ ಇತರೆ ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ನಿಗಾವಹಿಸಲು ಹಾಗೂ ಕಲಂ ೧೬೩ ರಡಿ ಹೊರಡಿಸಲಾದ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಪೊಲೀಸ್ ಇಲಾಖೆಗೆ ಸೂಚಿಸಿದರು.

ಕೆಲವು ಸಮುದಾಯದ ವಿದ್ಯಾರ್ಥಿಗಳು ಧಾರ್ಮಿಕ ಉಡುಪುಗಳನ್ನು ಧರಿಸಿಕೊಂಡು ಪರೀಕ್ಷೆ ಬರೆಯಲು ಇಚ್ಛಿಸಿದಲ್ಲಿ ಪರೀಕ್ಷಾ ಆರಂಭಕ್ಕೆ ೨ ಗಂಟೆ ಮೊದಲು ಪರೀಕ್ಷಾ ಕೇಂದ್ರದ ವಸ್ತ್ರ ಸಂಹಿತೆ ಅಧಿಕಾರಿ ಮುಂದೆ ಹಾಜರಾಗಬೇಕು ಎಂದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಂಡಲೀಕ ಕಾಂಬಳೆ, ಹಾಗೂ ಪರೀಕ್ಷಾ ಕಾರ್ಯಕ್ಕೆ ನೇಮಕಗೊಂಡ ಉಪ ಮುಖ್ಯ ಅಧೀಕರು, ಜಾಗೃತದಳದ ಸದಸ್ಯರು ಉಪಸ್ಥಿತರಿದ್ದರು.

ಪ್ರಭಾರ ಅಪರ ಜಿಲ್ಲಾಧಿಕಾರಿ ಮಹೇಶ ಮಾಲಗಿತ್ತಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಂಡಲೀಕ ಕಾಂಬಳೆ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net