ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಸೇರಿದಂತೆ ಅನೇಕ ಸಚಿವರು, ಶಾಸಕರು, ನಿಗಮ ಮಂಡಗಳ ಅಧ್ಯಕ್ಷರು, ಪಕ್ಷದ ಮುಖಂಡರು, ಕಾರ್ಯಕರ್ತರು ಎಲ್ಲರೂ ಸೇರಿಕೊಂಡು ಸಮೂಹಿಕ ನಾಯಕತ್ವ ಉಪ ಚುನಾವಣೆ ಎದುರಿಸಿದ್ದೇವೆ. ಚುನಾವಣೆಯಲ್ಲಿ ಶ್ರಮಿಸಿದ ಎಲ್ಲ ಮುಖಂಡರು, ಕಾರ್ಯಕರ್ತರು ಹಾಗೂ ಪಕ್ಷ ಬೆಂಬಲಿಸಿದ ಮತದಾರರಿಗೂ ಕಾಂಗ್ರೆಸ್ ಪಕ್ಷದಿಂದ ಕೃತಜ್ಞತೆ ಸಲ್ಲಿಸುತ್ತೇವೆ ಎಂದರು.