ಕಾಂಗ್ರೆಸ್ ನಾಯಕರ ನಾಲಿಗೆ ಹೀನ ಸಂಸ್ಕೃತಿ

ಬಾಗಲಕೋಟೆ ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಾಸಕರಾದ ಸಿದ್ದು ಸವದಿ, ಜಗದೀಶ ಗುಡಗುಂಟಿ, ವಿ.ಪ ಸದಸ್ಯ ಹನುಮಂತ ನಿರಾಣಿ, ರಾಜ್ಯಸಭಾ ಸದಸ್ಯ ಭಾಂಡಗೆ, ಮುತ್ತಣ್ಣ ಬೆಣ್ಣೂರ, ಭುವನೇಶ ಪೂಜಾರ ಇದ್ದರು.
ಬಾಗಲಕೋಟೆ ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಾಸಕರಾದ ಸಿದ್ದು ಸವದಿ, ಜಗದೀಶ ಗುಡಗುಂಟಿ, ವಿ.ಪ ಸದಸ್ಯ ಹನುಮಂತ ನಿರಾಣಿ, ರಾಜ್ಯಸಭಾ ಸದಸ್ಯ ಭಾಂಡಗೆ, ಮುತ್ತಣ್ಣ ಬೆಣ್ಣೂರ, ಭುವನೇಶ ಪೂಜಾರ ಇದ್ದರು.
Published on
ಬಾಗಲಕೋಟೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚುನಾವಣೆ ಪ್ರಚಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದ ಬಸವೇಶ್ವರ ವೃತ್ತದಲ್ಲಿ ಬುಧವಾರ ಸಂಜೆ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾ ಮೆರವಣಿಗೆ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು, ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಘೋಷಣೆ ಕೂಗಿದರು. ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಮಾತನಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೀಳು ಮಟ್ಟದ ಹೇಳಿಕೆ ನೀಡುವುದು ನಾಚಿಕೆಗೇಡಿನ ಸಂಗತಿ. ದೇಶ ಭಕ್ತರು, ಭಯೋತ್ಪಾದಕರ ನಡುವಿನ ವ್ಯತ್ಯಾಸ ಗೊತ್ತಿಲ್ಲವೇ? ಅನುಭವಿ ರಾಜಕಾರಣಿಯಾಗಿ ಇಂತಹ ಹೇಳಿಕೆ ನೀಡುವುದು ತರವಲ್ಲ. ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದರು.
ತೇರದಾಳ ಶಾಸಕ ಸಿದ್ದು ಸವದಿ ಮಾತನಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ನಾಯಕರು ದ್ವೇಷ, ಅಸೂಯೆ ಹೊಂದಿದ್ದಾರೆ. ವಿರೋಧ ಪಕ್ಷವಾಗಿ ಕೆಲಸ ಮಾಡುವ ಬದಲು ವೈಯಕ್ತಿಕ ಟೀಕೆ ಟಿಪ್ಪಣಿ ಮಾಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ೧೪೦ ಕೋಟಿ ಭಾರತೀಯ ಪ್ರತಿನಿಽ ಎನ್ನುವುದು ಯಾರು ಮರೆಯಬಾರದು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಭಾರತೀಯ ಬಗ್ಗೆ ಗೌರವ ಕುಗ್ಗುತ್ತಿದೆ. ಕಾಂಗ್ರೆಸ್‌ಗೆ ಸೂಕ್ತ ಸಮಯದಲ್ಲಿ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದರು.
ಜಮಖಂಡಿ ಶಾಸಕ ಜಗದೀಶ ಗುಡುಗುಂಟಿ ಮಾತನಾಡಿ, ಕಾಂಗ್ರೆಸ್ ನಾಯಕರಿಗೆ ದೇಶ, ಸೈನ್ಯದ ಬಗ್ಗೆ ಅಭಿಮಾನವಿಲ್ಲ. ದೇಶ ಸೇವಕರ ಬಗ್ಗೆ ಗೌರವಿಲ್ಲ. ಪ್ರತಿಯೊಂದರಲ್ಲಿ ವಿರೋಧ ಮಾಡುವುದು ಅವರ ಅಭ್ಯಾಸವಾಗಿದೆ. ಕೀಳು ಮಟ್ಟದ ಹೇಳಿಕೆ ನೀಡಿ ದೇಶದ ಗೌರವಕ್ಕೆ ಧಕ್ಕೆ ತರುತ್ತಿದ್ದಾರೆ. ಪ್ರಧಾನಿ ಮೋದಿ ದೇಶ ಕಂಡ ಪ್ರಮಾಣಿಕ ಪ್ರಧಾನ ಮಂತ್ರಿ. ಅಂತಹ ಅವರ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡುವುದು ಸಮಂಜಸವಲ್ಲ ಎಂದು ದೂರಿದರು.
ವಿಧಾನ ಪರಿಷತ್ತ ಸದಸ್ಯ ಹನಮಂತ ನಿರಾಣಿ ಮಾತನಾಡಿ, ಕಾಂಗ್ರೆಸ್ ನಾಯಕರ ನಾಲಿಗೆ ಎಲುಬು ಇಲ್ಲದ ನಾಲಿಗೆ. ವಿಷಕಾರಿ ಸಂಸ್ಕೃತಿ ಹೊಂದಿದ್ದಾರೆ. ಹತಾಶೆಯ ಪರಾಕಾಷ್ಠೆ ತಲುಪಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಮಾತನಾಡಿದರು. ಮುತ್ತಣ್ಣ ಬೆಣ್ಣೂರ, ವಿದ್ಯಾಧರ ಸವದಿ, ಭುವನೇಶ ಪೂಜಾರ, ಬಸವರಾಜ ಹುನಗುಂದ, ಸುರೇಶ ಕೋಣ್ಣೂರ, ಚಂದ್ರು ರಾಮೋಡಗಿ, ಶಿವು ಸಿಕ್ಕೇರಿ, ಶ್ರೀಧರ ನಾಗರಬೆಟ್ಟ, ಸುರೇಶ ಮಜ್ಜಗಿ, ಸಿದ್ದೇಶ ಜಿರ್ಲಿ, ರವಿ ಧಾಮಜಿ ಸೇರಿದಂತೆ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net