ಸಂವಿಧಾನ ಪ್ರಜಾಪ್ರಭುತ್ವದ ಆತ್ಮ

 ಮಹಾಲಿಂಗಪುರ ಪುರಸಭೆಯಲ್ಲಿ ಪುರಸಭೆ ಮುಖ್ಯಾಕಾರಿ ಎನ್.ಎಂ.ಲಮಾಣಿ ಧ್ವಜಾರೋಹಣ ನೆರವೇರಿಸಿದರು. ಪುರಸಭೆ ಮಾಜಿ ಅಧ್ಯಕ್ಷ ಯಲ್ಲನಗೌಡ ಪಾಟೀಲ,ಜಿಪಂ ಮಾಜಿ ಸದಸ್ಯ ಮಹಾಂತೇಶ ಹಿಟ್ಟಿನಮಠ,ಶೇಖರ ಅಂಗಡಿ ಇದ್ದರು.
ಮಹಾಲಿಂಗಪುರ ಪುರಸಭೆಯಲ್ಲಿ ಪುರಸಭೆ ಮುಖ್ಯಾಕಾರಿ ಎನ್.ಎಂ.ಲಮಾಣಿ ಧ್ವಜಾರೋಹಣ ನೆರವೇರಿಸಿದರು. ಪುರಸಭೆ ಮಾಜಿ ಅಧ್ಯಕ್ಷ ಯಲ್ಲನಗೌಡ ಪಾಟೀಲ,ಜಿಪಂ ಮಾಜಿ ಸದಸ್ಯ ಮಹಾಂತೇಶ ಹಿಟ್ಟಿನಮಠ,ಶೇಖರ ಅಂಗಡಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪುರಸಭೆಯಲ್ಲಿ ಧ್ವಜಾರೋಹಣ
  • ಮಹಾಂತೇಶ ಹಿಟ್ಟಿನಮಠ ಹೇಳಿಕೆ
  • ಭಾರತೀಯ ಸಂವಿಧಾನವು ವಿಶ್ವದ ಅತಿದೊಡ್ಡ ಲಿಖಿತ ಸಂವಿಧಾನ
ಮಹಾಲಿಂಗಪುರ: ಭಾರತವು ಜಗತ್ತಿನ ಮುಂದೆ ಸಾರ್ವಭೌಮ ಪ್ರಜಾಪ್ರಭುತ್ವ ಗಣರಾಜ್ಯವಾಗಿ ನಿಂತಿರುವ ಐತಿಹಾಸಿಕ ದಿನವಾಗಿದ್ದು, ಡಾ.ಬಿ.ಆರ್.ಅಂಬೇಡ್ಕರ್ ನೇತೃತ್ವದಲ್ಲಿ ರೂಪುಗೊಂಡ ಭಾರತೀಯ ಸಂವಿಧಾನವು ವಿಶ್ವದ ಅತಿದೊಡ್ಡ ಲಿಖಿತ ಸಂವಿಧಾನವಾಗಿದೆ ಎಂದು ಜಿಪಂ ಮಾಜಿ ಸದಸ್ಯ ಮಹಾಂತೇಶ ಹಿಟ್ಟಿನಮಠ ಹೇಳಿದರು.
ಸ್ಥಳೀಯ ಪುರಸಭೆ ಆವರಣದಲ್ಲಿ ಸೋಮವಾರ ಜರುಗಿದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಸಂವಿಧಾನ ಕೇವಲ ಗ್ರಂಥವಲ್ಲ, ಅದು ಪ್ರಜಾಪ್ರಭುತ್ವದ ಜೀವಾಳ. ಪ್ರತಿಯೊಬ್ಬ ನಾಗರಿಕ ತನ್ನ ಕರ್ತವ್ಯಗಳನ್ನು ನಿಷ್ಠೆಯಿಂದ ಪಾಲಿಸುವ ಮೂಲಕ ಸಂವಿಧಾನದ ಮೌಲ್ಯಗಳನ್ನು ಕಾಪಾಡಬೇಕು ಎಂದರು.
ಪುರಸಭೆ ಮುಖ್ಯಾಧಿಕಾರಿ ಎನ್.ಎಂ. ಲಮಾಣಿ ಧ್ವಜಾರೋಹಣ ನೆರವೇರಿಸಿದರು. ಪೊಲೀಸ್ ಸಿಬ್ಬಂದಿಯಿಂದ ಧ್ವಜವಂದನೆ ಸಲ್ಲಿಸಲಾಯಿತು.
ಪುರಸಭೆ ಮಾಜಿ ಅಧ್ಯಕ್ಷ ಯಲ್ಲನಗೌಡ ಪಾಟೀಲ, ಶೇಖರ ಅಂಗಡಿ, ಮುಸ್ತಾಕ್ ಚಿಕ್ಕೋಡಿ, ಪ್ರಕಾಶ ಅರಳಿಕಟ್ಟಿ, ಈರಪ್ಪ ದಿನ್ನಿಮನಿ, ನಿಂಗಪ್ಪ ಬಾಳಿಕಾಯಿ, ಪುರಸಭೆಯ ಸದಸ್ಯರು, ಸಿಬ್ಬಂದಿ ಹಾಗೂ ನಾಗರಿಕರು ಉಪಸ್ಥಿತರಿದ್ದರು.

ಪಿಕೆಪಿಎಸ್‌ನಲ್ಲಿ ಧ್ವಜಾರೋಹಣ

ಮಹಾಲಿಂಗಪುರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಘದ ಅಧ್ಯಕ್ಷ ಬಸನಗೌಡ ಪಾಟೀಲ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ರೈತರಿಗೆ ಟ್ರಾಕ್ಟರ್ ವಿತರಣೆ ಮಾಡಲಾಯಿತು. ಉಪಾಧ್ಯಕ್ಷ ಮಹಾಲಿಂಗಪ್ಪ ಪೂಜಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈರಣ್ಣ ಬೆಟಗೇರಿ, ನಿರ್ದೇಶಕರು, ಸಿಬ್ಬಂದಿ ಹಾಗೂ ಸದಸ್ಯರು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net