ಎಸ್‌ಐಆರ್ ಕಾರ್ಯಕ್ಕೆ ಸಹಕರಿಸಿ

ಬಾಗಲಕೋಟೆ ಜಿಲ್ಲೆಯ ವಿವಿಧೆಡೆ ನಡೆದಿರುವ ಎಸ್‌ಐಆರ್ ಪ್ರಕ್ರಿಯೆಯನ್ನು ಶನಿವಾರ ಜಿಲ್ಲಾಧಿಕಾರಿ ಸಂಗಪ್ಪ ಅವರು ಮನೆ ಮನೆಗೆ ತೆರಳಿ ಬೂತ್ ಮಟ್ಟದ ಅಧಿಕಾರಿಗಳ ಕಾರ್ಯವನ್ನು ವೀಕ್ಷಿಸಿದರು. ಆಹಾರ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಇಲಕಲ್ಲ ತಹಸೀಲ್ದಾರ್ ಅಮರೇಶ ಪಮ್ಮಾರ, ಹುನಗುಂದ ಗ್ರೇಡ್-2 ತಹಸೀಲ್ದಾರ್ ಮಹೇಶ ಸಂದಿಗವಾಡ ಇತರರಿದ್ದರು.
ಬಾಗಲಕೋಟೆ ಜಿಲ್ಲೆಯ ವಿವಿಧೆಡೆ ನಡೆದಿರುವ ಎಸ್‌ಐಆರ್ ಪ್ರಕ್ರಿಯೆಯನ್ನು ಶನಿವಾರ ಜಿಲ್ಲಾಧಿಕಾರಿ ಸಂಗಪ್ಪ ಅವರು ಮನೆ ಮನೆಗೆ ತೆರಳಿ ಬೂತ್ ಮಟ್ಟದ ಅಧಿಕಾರಿಗಳ ಕಾರ್ಯವನ್ನು ವೀಕ್ಷಿಸಿದರು. ಆಹಾರ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಇಲಕಲ್ಲ ತಹಸೀಲ್ದಾರ್ ಅಮರೇಶ ಪಮ್ಮಾರ, ಹುನಗುಂದ ಗ್ರೇಡ್-2 ತಹಸೀಲ್ದಾರ್ ಮಹೇಶ ಸಂದಿಗವಾಡ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮನೆ ಮನೆಗೆ ತೆರಳಿ ಎಸ್‌ಐಆರ್ ಪ್ರಗತಿ ಪರಿಶೀಲನೆ
  • ವಿವಿಧೆಡೆ ಭೇಟಿ ನೀಡಿದ ಜಿಲ್ಲಾಧಿಕಾರಿ ಸಂಗಪ್ಪ
  • ಅಧಿಕಾರಿಗಳಿಗೆ ಸೂಚನೆ
ಬಾಗಲಕೋಟೆ: ಜಿಲ್ಲೆಯ ಹುನಗುಂದ, ಇಳಕಲ್ಲ ಹಾಗೂ ಅಮೀನಗಡ ಪಟ್ಟಣದ ಮನೆ ಮನೆಗೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಶನಿವಾರ ಭೇಟಿ ನೀಡಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್.ಐ.ಆರ್) ಕಾರ್ಯದ ಪ್ರಗತಿಯನ್ನು ಪರಿಶೀಲಿಸಿದರು.
ಮನೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಮೇಲ್ವಿಚಾರಕರು ಮತದಾರರಿಗೆ ಎನ್ಯೂಮಿನೇಷನ್ ಫಾರ್ಮ್ ವಿತರಿಸುತ್ತಿರುವುದು, ಅಗತ್ಯ ಮಾಹಿತಿಯನ್ನು ಸಂಗ್ರಹಿಸುತ್ತಿರುವುದು ಹಾಗೂ ದಾಖಲೆಗಳ ಪರಿಶೀಲನೆ ನಡೆಸುತ್ತಿರುವ ವಿಧಾನವನ್ನು ಅವಲೋಕಿಸಿದರು. ಮತದಾರರಿಗೆ ಎಸ್.ಐ.ಆರ್ ಕುರಿತು ಸಮರ್ಪಕ ಮಾಹಿತಿ ನೀಡಿ ಅರ್ಹ ಪ್ರತಿಯೊಬ್ಬ ಮತದಾರರ ವಿವರಗಳನ್ನು ನಿಖರವಾಗಿ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯದ ಹಿನ್ನೆಲೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಮೇಲ್ವಿಚಾರಕರಿಗೆ ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ಒದಗಿಸುವ ಮೂಲಕ ಎಸ್‌ಐಆರ್ ಕಾರ್ಯಕ್ಕೆ ಸಹಕರಿಸುವಂತೆ ಜಿಲ್ಲಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.
ಹುನಗುಂದಲ್ಲಿರುವ ಡಿ.ದೇವರಾಜ ಅರಸು ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಕಲ್ಪಿಸಲಾಗುತ್ತಿರುವ ಮೂಲಸೌಕರ್ಯ ಹಾಗೂ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಪೂರೈಕೆ, ಸ್ವಚ್ಛತೆ, ಆರೋಗ್ಯ ಮತ್ತು ಅಗತ್ಯ ಮೂಲಸೌಕರ್ಯಗಳ ನಿರ್ವಹಣೆಗೆ ವಿಶೇಷ ಗಮನ ಹರಿಸಬೇಕು. ಲೋಪ ಕಂಡುಬಂದಲ್ಲಿ ಕೂಡಲೇ ಸರಿಪಡಿಸುವ ಕೆಲಸವಾಗಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಹುನಗುಂದ ತಹಸೀಲ್ದಾರ್ ಕಚೇರಿಗೆ ಭೇಟಿ ನೀಡಿ, ಕಚೇರಿ ಕಾರ್ಯವೈಖರಿ, ಸಾರ್ವಜನಿಕ ಸೇವೆಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಿದರು. ಕಂದಾಯ ಇಲಾಖೆಯ ವಿವಿಧ ದಾಖಲೆಗಳು, ಅರ್ಜಿಗಳ ವಿಲೇವಾರಿ, ಪಹಣಿ, ಇ-ಖಾತೆ, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳ ವಿತರಣೆಯ ಪ್ರಗತಿ ಹಾಗೂ ದೂರುಗಳ ನಿರ್ವಹಣೆ ಸೇರಿ ಸಾರ್ವಜನಿಕರ ಸೇವೆಗಳ ಕುರಿತು ಮಾಹಿತಿ ಪಡೆದುಕೊಂಡರು.
ಸಾರ್ವಜನಿಕರು ಕಚೇರಿಗೆ ಬಂದಾಗ ಯಾವುದೇ ತೊಂದರೆಯಾಗದಂತೆ ಸುಗಮ ಸೇವೆ ಒದಗಿಸುವುದರ ಜೊತೆಗೆ ಅವರೊಂದಿಗೆ ಸೌಜನ್ಯದಿಂದ ವರ್ತಿಸಿ, ಅವರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ಮೂಲಕ ಜನಸ್ನೇಹಿ ಆಡಳಿತ ನೀಡಬೇಕು ಎಂದರು.
ಆಹಾರ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಇಳಕಲ್ಲ ತಹಸೀಲ್ದಾರ್ ಅಮರೇಶ ಪಮ್ಮಾರ, ಹುನಗುಂದ ಗ್ರೇಡ್-2 ತಹಸೀಲ್ದಾರ್ ಮಹೇಶ ಸಂದಿಗವಾಡ, ಬೂತ್ ಮಟ್ಟದ ಅಽಕಾರಿಗಳು ಹಾಗೂ ಮೇಲ್ವಿಚಾರಕರು ಸೇರಿ ಇತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net