ಕರ್ನಾಟಕ ದರ್ಶನ ಪ್ರವಾಸಕ್ಕೆ ಡಿಸಿ ಚಾಲನೆ

ಬಾಗಲಕೋಟೆ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿರುವ ಕರ್ನಾಟಕ ದರ್ಶನ ಪ್ರವಾಸಕ್ಕೆ ಭಾನುವಾರ ಜಿಲ್ಲಾಧಿಕಾರಿ ಚಾಲನೆ ನೀಡಿದರು. ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಸೇರಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಇದ್ದರು.
ಬಾಗಲಕೋಟೆ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿರುವ ಕರ್ನಾಟಕ ದರ್ಶನ ಪ್ರವಾಸಕ್ಕೆ ಭಾನುವಾರ ಜಿಲ್ಲಾಧಿಕಾರಿ ಚಾಲನೆ ನೀಡಿದರು. ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಸೇರಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ರಾಜ್ಯ ಪ್ರವಾಸೋದ್ಯಮ
  • ಅಭಿವೃದ್ಧಿ ನಿಗಮ
ಬಾಗಲಕೋಟೆ: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಕರ್ನಾಟಕ ದರ್ಶನ ಪ್ರವಾಸಕ್ಕೆ ಭಾನುವಾರ ಜಿಲ್ಲಾಧಿಕಾರಿ ಸಂಗಪ್ಪ ಚಾಲನೆ ನೀಡಿದರು.
ಜಿಲ್ಲಾಡಳಿತ ಭವನದ ಮುಖ್ಯ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯ ವಿವಿಧ ಶಾಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯದ ಐತಿಹಾಸಿಕ ಹಾಗೂ ಸಾಂಸ್ಕೃತಿಕ ತಾಣಗಳನ್ನು ಪರಿಚಯಿಸುವ ಉದ್ದೇಶದಿಂದ ಈ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಪಠ್ಯದಲ್ಲಿರುವ ಇತಿಹಾಸವನ್ನು ನೇರವಾಗಿ ನೋಡಿದಾಗ ಅದರ ಅರಿವು ಮತ್ತಷ್ಟು ಗಾಡವಾಗುತ್ತದೆ. ಕರ್ನಾಟಕದ ವೈಭವಶಾಲಿ, ಸಂಸ್ಕೃತಿ, ಕಲೆ ಮತ್ತು ಪರಂಪರೆಯನ್ನು ಅರಿಯಲು ಈ ಪ್ರವಾಸ ಸಹಕಾರಿಯಾಗಿಲಿದೆ ಎಂದರು.

ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಜಿ.ಎಸ್.ಹಿತ್ತಲಮನಿ ಮಾತನಾಡಿ, ಕರ್ನಾಟಕ ದರ್ಶನ ಪ್ರವಾಸ ಮೂರು ದಿನಗಳ ಕಾಲ ಹಮ್ಮಿಕೊಂಡಿದ್ದು, ಜಿಲ್ಲೆಯ ಎಲ್ಲ ತಾಲೂಕಿನ ಪ್ರೌಢಶಾಲೆಯ ಪರಿಶಿಷ್ಟ ಜಾತಿಯ 266, ಪರಿಶಿಷ್ಟ ಪಂಗಡದ 168 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಪ್ರವಾಸದ ವೇಳೆಯಲ್ಲಿ ಶಿರಸಿ, ಬನವಾಸಿ, ಗೋಕರ್ಣ, ಮುರುಡೇಶ್ವರ, ಆನೆಗುಂದಿ, ಉಡುಪಿ, ಶ್ರವಣಬೆಳಗೊಳ, ಬೇಲೂರ, ಯಡೆಯೂರು ತಾಣಗಳ ದರ್ಶನ ಮಾಡಲಿದ್ದಾರೆಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಸೇರಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net