ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಸಂಗಪ್ಪ ಮಾತನಾಡಿ, ಉಪ ಬಾಗಲಕೋಟೆ ಚುನಾವಣೆಗೆ 2,59,797 ಜನ ಮತ ಚಲಾಯಿಸಲಿದ್ದಾರೆ. ಇದಕ್ಕಾಗಿ ಒಟ್ಟು 322 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.ಕಾಯ್ದಿರಿಸಿದ ಸಿಬ್ಬಂದಿಯೂ ಒಳಗೊಂಡಂತೆ ಒಟ್ಟು 1564 ಮತಗಟ್ಟೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಮತಗಟ್ಟೆ ಸಿಬ್ಬಂದಿಗಳು ಆಯಾ ಮತಗಟ್ಟೆಗಳಿಗೆ ತೆರಳಲು 35 ಬಸ್, 9 ಮಿನಿ ಬಸ್ಸುಗಳು, 11 ಮ್ಯಾಕ್ಸಿ ಕ್ಯಾಬ್, 10 ಟ್ರಾಕ್ಸ್ ವಾಹನಗಳ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ಹೊತ್ತಿಗೆ ಮತಗಟ್ಟೆಗಳಿಗೆ ತೆರಳಲಿದ್ದಾರೆ ಎಂದು ತಿಳಿಸಿದರು.